ಶಿವಮೊಗ್ಗ : ವೀರ ಸಾವರ್ಕರ್ ಫ್ಲೆಕ್ಸ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಭೆ ಹಿನ್ನೆಲೆಯಲ್ಲಿ ಹೇಳಿಕೆ ನೀಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಸ್ಲಿಮರ ಏರಿಯಾಗೆ ಬಂದು ಸಾವರ್ಕರ್ ಫ್ಲೆಕ್ಸ್ ಹಾಕುವ ಅಗತ್ಯ ಏನಿತ್ತು? ಎಂದು ಪಶ್ನಿಸಿದ್ದರು.
ಇದಕ್ಕೆ ಕಿಡಿಕಾರಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಮುಸ್ಲಿಮರ ಏರಿಯಾ ಎಂದರೆ ಅರ್ಥ ಏನು ಎಂದು ಪ್ರಶ್ನೆ ಮಾಡಿದ್ದಾರೆ. “ಮುಸ್ಲಿಂ ಪ್ರದೇಶ” ಎಂಬುದರ ಅರ್ಥವೇನು? ಪದೇ ಪದೇ ಜಿಹಾದಿ ಮನಸ್ಥಿತಿಯನ್ನು ಪ್ರದರ್ಶಿಸುವ ಮೂಲಕ ನೀವು ಅಮಾಯಕರನ್ನು ಕೊಲ್ಲುವ ಜಿಹಾದಿಗಳಿಗಿಂತ ಹೆಚ್ಚು ಅಪಾಯಕಾರಿ ಎಂದು ಸಾಬೀತುಪಡಿಸುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಷ್ಟ್ರೀಯವಾದಿ ವೀರ್ ಸಾವರ್ಕರ್ ಮತ್ತು ಟಿಪ್ಪು ಸುಲ್ತಾನ್ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ನಿಮಗೆ ಸವಾಲು ಹಾಕುತ್ತೇನೆ. ಸ್ವೀಕರಿಸಲು ಧೈರ್ಯವಿದೆಯೇ? ಎಂದು ಇದೇ ಸಂದರ್ಭದಲ್ಲಿ ಸವಾಲು ಹಾಕಿದ್ದಾರೆ. ಶಿವಮೊಗ್ಗದ ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಫೋಟೋ ಏಕೆ ಹಾಕೋಕೆ ಹೋದರು ಎಂಬ ಸಿದ್ದರಾಮಯ್ಯ ಪ್ರಶ್ನಿಸಿದ್ದರು. ಸಿದ್ದರಾಮಯ್ಯ ನೀಡಿರುವ ಈ ಹೇಳಿಕೆ ಇದೀಗ ಟ್ವಿಟ್ಟರ್‌ನಲ್ಲೂ ಸಾಕಷ್ಟು ಟ್ರೆಂಡ್ ಸೃಷ್ಟಿಸಿದೆ.