Monday, December 23, 2024

ಬಿಎಸ್​ವೈ’ಗೆ ದೊಡ್ಡ ಜವಾಬ್ದಾರಿ ನೀಡಿದ ರಾಷ್ಟ್ರೀಯ ಬಿಜೆಪಿ.!

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯ ಪುನರ್ ರಚನೆ ಮಂಡಳಿಯಲ್ಲಿ ಬಿ.ಎಸ್.ಯಡಿಯೂರಪ್ಪಗೆ ಸ್ಥಾನ ನೀಡಿ ರಾಷ್ಟ್ರೀಯ ಬಿಜೆಪಿ ಆದೇಶಿಸಿದೆ.

ಸದಸ್ಯ ಸ್ಥಾನ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ‌ಪಿ. ನಡ್ಡಾ. ಬಿಜೆಪಿಯಲ್ಲಿ ಚುನಾವಣೆ, ಟಿಕೆಟ್​ ಹಂಚಿಕೆ, ನೀತಿ ತೀರ್ಮಾನ ಕೈಗೊಳ್ಳುವ ಉನ್ನತ ಸಮಿತಿಯೇ ಬಿಜೆಪಿ ಸಂಸದೀಯ ಮಂಡಳಿ.

ಈ ಹಿಂದೆ ಕರ್ನಾಟಕದ ಅನಂತ ಕುಮಾರ್ ಸಂಸದೀಯ ಮಂಡಳಿಯ ಸದಸ್ಯರಾಗಿದ್ದರು. ಬಿಜೆಪಿಯ ಸಂಸದೀಯ ಮಂಡಳಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಗೂ ಸ್ಥಾನ ನೀಡಲಾಗಿದೆ.

RELATED ARTICLES

Related Articles

TRENDING ARTICLES