Wednesday, January 22, 2025

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು.!

ಮಡಿಕೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಘಟನೆ ಮಡಿಕೇರಿ ಜ.ತಿಮ್ಮಯ್ಯ ವೃತ್ತದಲ್ಲಿ ನಡೆದಿದೆ.

ಬಿಜೆಪಿ ಕಾರ್ಯಕರ್ತರು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದರು. ಈ ವೇಳೆ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಮೊಟ್ಟೆ ಎಸೆದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ತಮ್ಮ ನಾಯಕ ಸಿದ್ದರಾಮಯ್ಯ ಪರ ಕಾಂಗ್ರೆಸ್ ಕಾರ್ಯಕರ್ತರ ಘೊಷಣೆ ಕೂಗಿದರು. ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಈ ನಡುವೆ ಪೊಲೀಸರು ಬಂದು ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟ ತಡೆಯುವಲ್ಲಿ ಹರಸಾಹಸಪಟ್ಟರು.

RELATED ARTICLES

Related Articles

TRENDING ARTICLES