Monday, December 23, 2024

ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ, ಗೌರವಯುತವಾಗಿ ನಡೆದುಕೊಳ್ಳಿ ಎಂದ ಯಡಿಯೂರಪ್ಪ

ಬೆಂಗಳೂರು: ಮಡಿಕೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮೊಟ್ಟೆ ಎಸೆದ ಬಗ್ಗೆ ಬಿ.ಎಸ್​ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಸರಿಯಲ್ಲ ಯಾವುದೇ ಕಾರಣಕ್ಕೂ ಈ ತರಹ ಘಟನೆ ನಡೆಯಬಾರದು. ಸಿದ್ದರಾಮಯ್ಯ ಇರಬಹುದು ಯಡಿಯೂರಪ್ಪ ಇರಬಹುದು ಈ ರೀತಿಯಲ್ಲಿ ಮೊಟ್ಟೆ ಎಸೆಯಬಾರದು. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಇದ್ದಾರೆ ಅವರಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ಈ ರೀತಿಯಲ್ಲಿ ನಡವಳಿಕೆ ಯಾವುದೇ ಕಾರಣಕ್ಕೂ ಸಹಿಸಿಕೂಡದು. ಈ ರೀತಿಯಲ್ಲಿ ಯಾರು ಮಾಡಬಾರದು ಅಂತ ನಾನು ಕೇಳಿಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಇನ್ನು ಮೊಟ್ಟೆ ಎಸೆದ ಬಗ್ಗೆ ಈಗಾಗಲೇ ಶಾಸಕ ಯತೀಂದ್ರ ಸಿದ್ದರಾಮಯ್ಯ ನೇತೃತ್ವದಲ್ಲಿ ಮೈಸೂರಿನ ಟಿ.ನರಸೀಪುರ ಹೆದ್ದಾರಿಯ ಟೋಲ್ ಬಳಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ. ಸುಮಾರು 20 ನಿಮಿಷಗಳ ಕಾಲ ರಸ್ತೆ ತಡೆದು ಕಾಂಗ್ರೆಸ್ ಪ್ರತಿಭಟನೆ ಮಾಡಿದೆ. ಇದೇ ರೀತಿ ಮುಂದುವರೆದರೆ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಲಾಗಿದೆ.

RELATED ARTICLES

Related Articles

TRENDING ARTICLES