Thursday, January 23, 2025

ಜಿಂಕೆ ಹತ್ಯೆ ಕೇಸ್, ಇಬ್ಬರು ಆರೋಪಿಗಳ ಬಂಧನ

ಕಾರವಾರ:  ಉತ್ತರ ಕನ್ನಡ ಜಿಲ್ಲೆಯ ಬನವಾಸಿ ಅರಣ್ಯ ವಲಯದ ಕಾನಕೊಪ್ಪ ಗ್ರಾಮದಲ್ಲಿ ಜಿಂಕೆ ಹತ್ಯೆ ಮಾಡಿರುವ ಇಬ್ಬರು ಆರೋಪಿಗಳನ್ನು ಬನವಾಸಿ ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದು ಓರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಖಚಿತ ಮಾಹಿತಿ ಮೇರೆಗೆ ಬನವಾಸಿ ವಲಯ ಅರಣ್ಯಾಧಿಕಾರಿಗಳು ಪರಮೇಶ್ವರ ಮಾದೇವ ಮಡಿವಾಳ, ಶಿವಪ್ಪ ಬಸ್ಯಾ ಗೌಡ ಎಂಬುವವರನ್ನ ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಶಿವರಾಮ ತಿಮ್ಮಾ ನಾಯ್ಕ ತಲೆಮರೆಸಿಕೊಂಡಿದ್ದು ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಜಿಂಕೆ ಮಾಂಸ ಹಾಗೂ ಹತ್ಯೆಗೆ ಬಳಸಿದ್ದ ವಸ್ತುಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಶಿರಸಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಅಜ್ಜಯ್ಯ ಜಿ ಆರ್ ಮಾರ್ಗದರ್ಶನದಲ್ಲಿ, ಸಹಾಯಕ
ಅರಣ್ಯ ಸಂರಕ್ಷಣಾಧಿಕಾರಿ ಅಶೋಕ ಅಲಗೂರ್, ಬನವಾಸಿ ವಲಯ ಅರಣ್ಯಾಧಿಕಾರಿ ಉಷಾ ಆರ್ ಕಬ್ಬೇರ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

RELATED ARTICLES

Related Articles

TRENDING ARTICLES