Friday, May 17, 2024

ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ನಿತ್ಯ ಕಡ್ಡಾಯ : ಬಿ.ಸಿ. ನಾಗೇಶ್

ಬೆಂಗಳೂರು : ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.

ಇನ್ನು, ಎಲ್ಲಾ ಶಾಲೆಗಳಲ್ಲಿ ಮುಂಜಾನೆ ವೇಳೆಯಲ್ಲಿ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಿಸಬೇಕು ಎಂದು ಸುತ್ತೋಲೆ ಹೊರಡಿಸಿದೆ. ಈ ಆದೇಶದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ, ಕಾಲೇಜುಗಳಲ್ಲಿ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು ಸಾಮೂಹಿಕ ಪ್ರಾರ್ಥನೆ ಮಾಡಲು ಸ್ಥಳ ಅವಕಾಶ ಇಲ್ಲದೆ ಹೋದರೆ ಶಾಲಾ ಕೊಠಡಿಗಳಲ್ಲೆ ರಾಷ್ಟ್ರಗೀತೆ ಹಾಡಿಸುವಂತೆ ತಿಳಿಸಿದೆ.

RELATED ARTICLES

Related Articles

TRENDING ARTICLES