Wednesday, January 22, 2025

ಮೊಟ್ಟೆ ಎಸೆಯಲು ನಮಗೆ ಬರಲ್ವಾ.. ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ: ಸಿದ್ದರಾಮಯ್ಯ ಪ್ರತಿಕ್ರಿಯೆ

ಮಡಿಕೇರಿ: ಮೊಟ್ಟೆ ಎಸೆದ ಬಗ್ಗೆ ಮಡಿಕೇರಿಯ ಸರ್ಕ್ಯೂಟ್ ಹೌಸ್‌ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ್ದಾರೆ.

ರಾಜ್ಯದಲ್ಲಿ 5 ಲಕ್ಷದ 23 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ಇವತ್ತಿನವರೆಗೆ ಸರ್ವೆ ಮಾಡಿ ಪರಿಹಾರ ಕೊಡುವ ಪ್ರಯತ್ನವನ್ನ ಸರ್ಕಾರ ಮಾಡಿಲ್ಲ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಳೆಹಾನಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕೊಡಗಿನ ಮಳೆಹಾನಿ ಆದ ಪ್ರದೇಶಗಳಿಗೆ ಭೇಟಿ ಕೊಟ್ಟು ಪರಿಶೀಲನೆ ಮಾಡಿದ್ದೇನೆ.

2018,19, 20ರಲ್ಲಿ ಆದ ಮಳೆಯ ಹಾನಿಗೆ ಸರ್ಕಾರ ಇನ್ನೂ ಕೂಡ ಪರಿಹಾರ ನೀಡಿಲ್ಲ. ಸೇತುವೆ ತಡೆಗೋಡೆಗಳನ್ನು ತಿರಾ ಕಳಪೆಯಾಗಿ ಮಾಡಿದ್ದಾರೆ ಅದಕ್ಕೆ ಅವೆಲ್ಲಾ ಹೀಗಾಗಿವೆ. ಇನ್ನು ಸಿದ್ದರಾಮಯ್ಯ ಭೇಟಿಗೆ ಬಿಜೆಪಿ, ಹಿಂದೂಪರ ಸಂಘಟನೆ ವಿರೋಧ ವಿಚಾರವಾಗಿ ಪ್ರತಿಕ್ರಿಯಸಿ, ನಾನು ಬಂದು ನೋಡ್ತೀನಿ‌ ಅಂತ ಕಾರ್ಯಕರ್ತರನ್ನ ಬಿಟ್ಟು ಪ್ರತಿಭಟನೆ ಮಾಡಿಸುತ್ತಿದ್ದಾರೆ ಎಂದರು.

ಈ ಬಾರಿ ಕೊಡಗಿನಲ್ಲಿ ಎರಡೂ ಕಡೆ ಕಾಂಗ್ರೆಸ್ ಗೆಲ್ಲುತ್ತೆ ಅಂತ ಬಿಜೆಪಿ ಹತಾಶರಾಗಿ ಹೀಗೆ ಪ್ರತಿಭಟನೆ ಮಾಡಿದ್ದಾರೆ. ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ ನಾವು ಅಲ್ಲಿಂದಲೇ ಮಾಡಿಕೊಂಡು ಬಂದಿರೋದು. ನಾವು ಹೋರಾಟ ಮಾಡೋಕೆ‌ ಶುರು ಮಾಡಿದ್ರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ.

ನಮ್ಮ ಕಾರ್ಯಕರ್ತರು ಬೀದಿಗಿಳಿದ್ರೆ ಬಿಜೆಪಿಯವರಿಗೆ ಕೊಡಗಿನಲ್ಲೇ ತಿರುಗಾಡೋಕೆ ಆಗಲ್ಲ. ಟಿಪ್ಪು ವಿಚಾರನೂ ಇಲ್ಲ ಏನೂ ಇಲ್ಲ ಟಿಪ್ಪು ಜಯಂತಿ ಆದ್ಮೇಲೆ ನಾನು ಕೊಡಗಿಗೆ ಬಂದಿಲ್ವಾ. ಕಳಪೆ ಕೆಲಸ ನನಗೆ ಗೊತ್ತಾಗದಿರಲಿ ಅಂತ ಮಾತ್ರ ಪ್ರತಿಭಟನೆ ಮಾಡಿದ್ದಾರೆ ಎಂದರು.

ಯಡಿಯೂರಪ್ಪರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವತ್ತು ವಯಸ್ಸಾಯ್ತು ಅಂತ ತೆಗೆದು ಈಗ ದೊಡ್ಡ ಹುದ್ದೆ ಅಂತಾರಲ್ವಾ ಅವರ ವಯಸ್ಸು ಹಿಂದೆ ಹೋಯ್ತಾ. ಯಡಿಯೂರಪ್ಪರನ್ನ ಸಮಾಧಾನ ಮಾಡಲು, ಚುನಾವಣೆಗಾಗಿ ಹೀಗೆ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

RELATED ARTICLES

Related Articles

TRENDING ARTICLES