Tuesday, January 14, 2025

ಮೊಟ್ಟೆ ತಿಂದು ವಿನೂತನ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು.!

ಮಂಡ್ಯ: ಬಿಜೆಪಿ ಕಾರ್ಯಕರ್ತರಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು.

ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ ಮೊಟ್ಟೆ ತಿಂದು ಕಾಂಗ್ರೆಸ್​ ಕಾರ್ಯಕರ್ತರಿಂದ ವಿನೂತನ ಪ್ರತಿಭಟನೆ ನಡೆಸಿಲಾಯಿತು. ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿರುವುದು ಖಂಡನೀಯ. ಸಿದ್ದರಾಮಯ್ಯ ಅವರ ಕಾರಿನ ಮೇಲೆ ವಿಷಪೂರಿತ ಮೊಟ್ಟೆಯನ್ನು ಎಸೆದಿದ್ದಾರೆ. ಭದ್ರತೆ ಲೋಪದಿಂದ ಈ ಕೃತ್ಯ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಮಡಿಕೇರಿಯಲ್ಲಿ ಸಿದ್ದರಾಮಯ್ಯ ಅವರ ಕಾರಿನ ಮೇಳೆ ಮೊಟ್ಟೆ ಎಸೆದವರ ವಿರುದ್ಧ ಸೂಕ್ತ ಕ್ರಮಕ್ಕಾಗಿ ತೆಗೆದುಕೊಳ್ಳಬೇಕು. ತಕ್ಷಣವೇ ಇಂತಹ ಕಿಡಿಗೆಡಿಗಳನ್ನ ಬಂಧಿಸುವಂತೆ ಆಗ್ರಹಪಡಿಸಲಾಯಿತು.

RELATED ARTICLES

Related Articles

TRENDING ARTICLES