Monday, December 23, 2024

ನರೇಂದ್ರ ಮೋದಿ’ಗೆ ಪತ್ರ ಬರೆದು ಮನವಿ ಮಾಡಿದ ಅಫ್ಘಾನಿಸ್ಥಾನದ ವಿದ್ಯಾರ್ಥಿನಿ

ನವದೆಹಲಿ: ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ಅಲ್ಲಿನ ವಿದ್ಯಾರ್ಥಿಗಳ ಪಾಡು ಹೇಳತೀರದಂತಾಗಿದೆ. ಅಧ್ಯಯನಕ್ಕೆ ವಿದೇಶಕ್ಕೆ ತೆರಳಲು ವೀಸಾ ಸಿಗದೇ ಸಿಲುಕಿಕೊಂಡಿದ್ದಾರೆ. ಓದಿನ ಹಂಬಲದಲ್ಲಿ ಅಫ್ಘನ್‌ನ ಯುವತಿಯೊಬ್ಬಳು ಪ್ರಧಾನಿ ನರೇಂದ್ರ ಮೋದಿ ಬಳಿ ಮನವಿ ಮಾಡಿಕೊಂಡಿದ್ದಾಳೆ.

ಅಫ್ಘಾನಿಸ್ತಾನದ ಕಾಲೇಜು ವಿದ್ಯಾರ್ಥಿನಿ ಫಾತಿಮಾ ನರೇಂದ್ರ ಮೋದಿ ಅವರಿಗೆ ಭಾರತದಲ್ಲಿ ಅಧ್ಯಯನ ಮಾಡಲು ವೀಸಾ ಪಡೆಯಲು ತೊಂದರೆಯಾಗುತ್ತಿರುವ ಬಗ್ಗೆ ಹೇಳಿಕೊಂಡಿದ್ದಾಳೆ. ನಾನು ಅಫ್ಘಾನಿಸ್ತಾನದ ಕಾಲೇಜು ಹುಡುಗಿ ಫಾತಿಮಾ, ಭಾರತದಲ್ಲಿ ಅಧ್ಯಯನವನ್ನು ಮುಂದುವರಿಸಲು ನನಗೆ ಸಹಾಯ ಮಾಡುವಂತೆ ಭಾರತದ ಪ್ರಧಾನಿಗೆ ಮನವಿ ಮಾಡುತ್ತೇನೆ ಎಂದಿದ್ದಾಳೆ.

ನಾವು ಭಾರತವನ್ನು ಪ್ರೀತಿಸುತ್ತೇವೆ, ಅದು ನಮ್ಮ ಕುಟುಂಬದಂತೆಯೇ ಎಂದು ಫಾತಿಮಾ ಪ್ರಧಾನಿಗೆ ಹೇಳಿದ ವೀಡಿಯೊದಲ್ಲಿ ಹೇಳಿದ್ದಾಳೆ.

ಭಾರತದಲ್ಲಿ ಓದುತ್ತಿರುವ ಸುಮಾರು 5,000 ಅಫ್ಘಾನಿಸ್ತಾನದ ವಿದ್ಯಾರ್ಥಿಗಳು ಕಳೆದ ವರ್ಷದಿಂದ ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದಾರೆ. ತಮಗೆ ವೀಸಾ ದೊರಕದ ಕಾರಣ ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದಾಳೆ.

RELATED ARTICLES

Related Articles

TRENDING ARTICLES