Monday, December 23, 2024

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರವಿಚಂದ್ರನ್ ಪುತ್ರ

ಸ್ಯಾಂಡಲ್​ವುಡ್​ನ ಕ್ರೇಜಿಸ್ಟಾರ್‌ ವಿ. ರವಿಚಂದ್ರನ್ ಅವರ ಹಿರಿಯ ಪುತ್ರ ನಟ ಮನೋರಂಜನ್‌ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಆಗಸ್ಟ್ 21ರಂದು 8.30ರ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆ ಮಾಡುವ ಮೂಲಕ ಸಂಗೀತಾ ಎಂಬವರನ್ನು ವರಿಸಿದ್ದಾರೆ. ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್​ನಲ್ಲಿನ ವೈಟ್ ಪೆಟಲ್ಸ್ ತ್ರಿಪುರವಾಸಿನಿಯಲ್ಲಿ ನಡೆದ ಶುಭಘಳಿಗೆಯಲ್ಲಿ ಚಿತ್ರರಂಗದ ಕೆಲ ಗಣ್ಯವ್ಯಕ್ತಿಗಳು ಭಾಗವಹಿಸಿದ್ದರು. ಇದೇ ವೇಳೆ ರವಿಚಂದ್ರನ್ ಅವರ ಆಪ್ತರೆನಿಸಿಕೊಂಡಿರುವ ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್​ಕುಮಾರ್, ನಟಿ ಖುಷ್ಬೂ, ಉಮಾಶ್ರೀ, ನಟ ಶರಣ್, ಹಂಸಲೇಖಾ, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸೇರಿದಂತೆ ಪ್ರಮುಖ ಉಪಸ್ಥಿತರಿದ್ದರು.

ಇನ್ನು ಇಂದು ಸಂಜೆ ಅರಮನೆ ಮೈದಾನದ ವೈಟ್ ಪೆಟಲ್ಸ್ ತ್ರಿಪುರವಾಸಿನಿಯಲ್ಲಿ ಆರಕ್ಷತೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಚಿತ್ರರಂಗದ ಗಣ್ಯರು ಹಾಗೂ ಕೆಲ ರಾಜಕಾರಣಿಗಳು ಭಾಗವಹಿಸುವ ನಿರೀಕ್ಷೆಯಿದೆ.

RELATED ARTICLES

Related Articles

TRENDING ARTICLES