Monday, December 23, 2024

ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ನಿಧನ

ಬೆಂಗಳೂರು : ಮುಖ್ಯಮಂತ್ರಿಗಳ ಮಾಧ್ಯಮ‌ ಸಂಯೋಜಕ ಗುರುಲಿಂಗ ಸ್ವಾಮಿ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ, ಸಚಿವ ಕೆ.ಗೋಪಾಲಯ್ಯ, ಪತ್ರಕರ್ತರು ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಗುರುಲಿಂಗ ಸ್ವಾಮಿ ಹೊಳಿಮಠ ಅವರು ಮುಖ್ಯಮಂತ್ರಿ ಮಾಧ್ಯಮ ಸಂಯೋಜಕಯಾಗಿ ಕೆಲಸ ಮಾಡುತ್ತಿದ್ದರು, ಇದಲ್ಲದೇ ಇವರು ಕನ್ನಡದ ಅನೇಕ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದರು. ಬೆಳಗಾವಿ ಜಿಲ್ಲೆಯ ರಾಮದುರ್ಗ ಮೂಲದ ಗುರುಲಿಂಗಸ್ವಾಮಿ ಹೊಳಿಮಠ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದರು.

ವಿವಿಧ ಮಾಧ್ಯಮಗಳಲ್ಲಿ 1998ರಿಂದ ಸೇವೆ ಸಲ್ಲಿಸುತ್ತಿದ್ದರು. ಗುರುಲಿಂಗ ಸ್ವಾಮಿ ಅವರು ಇಂದು ಬೆಳಗ್ಗೆ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಮಾಡುವಾಗ ಎದೆನೋವು ಕಾಣಿಸಿಕೊಂಡಿದ್ದು, ಬಳಿಕ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ನಿಧನರಾಗಿದ್ದಾರೆ. ಇವರ ಆಕಾಲಿಕ ನಿಧನಕ್ಕೆ ಪತ್ರಕರ್ತರು ಕಂಬನಿ ಮಿಡಿದಿದ್ದಾರೆ.

RELATED ARTICLES

Related Articles

TRENDING ARTICLES