ಕಾರವಾರ : ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಿರ್ಜಾನ ಗ್ರಾಮದ ರಾಮನಗರದ ಸುಬ್ರಹ್ಮಣ್ಯ ನಾಯ್ಕ ಅವರ ಮನೆಯಲ್ಲಿ ಅಪರೂಪದ ಬಿಳಿ ಹಾವು ಪ್ರತ್ಯಕ್ಷಗೊಂಡು ಸಾರ್ವಜನಿಕರಲ್ಲಿ ಗೊಂದಲವುಂಟು ಮಾಡಿರುವ ಘಟನೆಯೊಂದು ನಡೆದಿದೆ.
ಅಪರೂಪರ ಬಿಳಿ ಹೆಬ್ಬಾವು ಬಂದಿದೆ ಎನ್ನುವ ವಿಚಾರವನ್ನ ಕುಮಟಾದ ಉರಗ ತಜ್ಞ ಪವನ್ ಎಮ್ ನಾಯ್ಕ ಅವರಿಗೆ ತಿಳಿಸಿದ್ದು, ತಕ್ಷಣ ಸ್ಥಳಕ್ಕೆ ಬಂದ ಪವನ್ ನಾಯ್ಕ ಇದು ಬಿಳಿ ಹಾವು ಹೆಬ್ಬಾವು ಎಂದು ಖಾತ್ರಿಪಡಿಸುವುದರೊಂದಿಗೆ ಆತಂಕ ತಿಳಿಯಾಯಿತು.
ಇಂತಹ ಹಾವುಗಳು ಬೇರೆಯ ಜಾತಿಯ ಹಾವಲ್ಲ. ಚರ್ಮಕ್ಕೆ ಬಣ್ಣ ನೀಡುವ ವರ್ಣ ದ್ರವ್ಯ ಗ್ರಂಥಿ ಅಂದರೆ ಮೆಲಾಲಿನ್ ಅಥವಾ ಪಿಗ್ಮೆಂಟ್ ನ ಕೊರತೆಯಿಂದ ಚರ್ಮಕ್ಕೆ ಬಣ್ಣ ಬರದೇ ಈ ರೀತಿ ಬಿಳಿ ಬಣ್ಣಕ್ಕೆ ಕಾರಣವಾಗುತ್ತದೆ. ಇದನ್ನ ಅಲ್ಬಿನೋ ಸ್ನೇಕ್ಸ್ ಎಂದು ಕೂಡಾ ಕರೆಯಲಾಗತ್ತೆ. ಆದ್ರೆ ಅಲ್ಬಿನೋ ಹಾವುಗಳಾದರೆ ಕಣ್ಣು ಸಹ ಕೆಂಪು ಮಿಶ್ರಿತ ಬಿಳಿ ಬಣ್ಣ ಇರಬೇಕಾಗುತ್ತದೆ. ಇದರ ಕಣ್ಣು ಅರ್ಧ ಮಾತ್ರ ಬಿಳಿ ಇದ್ದು ಇನ್ನರ್ಧ ಕಪ್ಪಿರೋ ಕಾರಣ ಇದನ್ನ ಅಲ್ಬಿನೋ ಹಾವಿನ ಗುಂಪಿಗೆ ಸೇರಿಲು ಸಾಧ್ಯವಿಲ್ಲ. ಆದರೂ ಇದು ಕರ್ನಾಟಕದಲ್ಲಿ ಸಿಕ್ಕಿರೋ 2 ನೇ ದಾಖಲೆ ಹಾಗೂ ಹಾವನ್ನು ಸುರಕ್ಷಿತ ಜಾಗಕ್ಕೆ ಬಿಡಲಾಗಿದೆ ಎಂದು ಪವನ್ ನಾಯ್ಕ ಮಾಹಿತಿ ನೀಡಿದ್ದಾರೆ.
ಉದಯ ಬರ್ಗಿ ಪವರ್ ಟಿವಿ ಕಾರವಾರ