Saturday, January 25, 2025

ಕಾಂಗ್ರೆಸ್​ನ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ಅವರು ರಾಜೀನಾಮೆ ನೀಡಿದ್ದು, ಈ ರಾಜೀನಾಮೆ ಪತ್ರವನ್ನ ಕಾಂಗ್ರೆಸ್​ ರಾಷ್ಟ್ರೀಯ ಕಾಂಗ್ರೆಸ್​ ಅಧ್ಯಕ್ಷ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ನ ಹಿಮಾಚಲ ಪ್ರದೇಶದ ಸ್ಟೀರಿಂಗ್ ಪ್ಯಾನೆಲ್ ಮುಖ್ಯಸ್ಥ ಆನಂದ್ ಶರ್ಮಾ ಮತ್ತು ಜಮ್ಮು ಮತ್ತು ಕಾಶ್ಮೀರ ಪ್ರಚಾರ ಸಮಿತಿಯ ಮುಖ್ಯಸ್ಥ ಗುಲಾಂ ನಬಿ ಆಜಾದ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ಅವರು ರಾಜೀನಾಮೆ ನೀಡಿದ್ದಾರೆ.

ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ​, ಪಕ್ಷವನ್ನ ಅಧಿಕಾರ ತರುವಲ್ಲಿ ಹೋರಾಡುವುದಕ್ಕಿಂತ ವಿದೇಶಿ ಪ್ರವಾಸದಲ್ಲಿ ಅತೀ ಹೆಚ್ಚು ಇರುವ ಪಕ್ಷಕ್ಕಾಗಿ ನಾನು ಕೆಲಸ ಮಾಡುವುದಿಲ್ಲ. ಕೆಳ ಹಂತದ ನಾಯಕರನ್ನ ಸರಿಯಾಗಿ ನಡೆಸಿಕೊಳ್ಳುವುದಿಲ್ಲ. ನಾನು ನೈತಿಕವಾಗಿ ಒಪ್ಪಿಕೊಳ್ಳಲು ಮತ್ತು ಪಕ್ಷದಲ್ಲಿ ಕೆಲಸ ಮಾಡುವುದನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ಪ್ರಸ್ತುತ ದಿನಗಳಲ್ಲಿ ತೆಗೆದುಕೊಳ್ಳುತ್ತಿರುವ ನಿರ್ಧಾರ, ಸಿದ್ಧಾಂತ ಮತ್ತು ದೃಷ್ಟಿಯು ಇಂದಿನ ಯುವ ಪೀಳಿಗೆ ಜನರಿಗೆ ಸರಿ ಹೊಂದುತ್ತಿಲ್ಲ. ಇದು ಆಧುನಿಕ ಭಾರತವಾಗಿದೆ. ಇದಕ್ಕೆ ತಕ್ಕಂತೆ ಪಕ್ಷ ಇರಬೇಕು ಎಂದಿದ್ದಾರೆ.

RELATED ARTICLES

Related Articles

TRENDING ARTICLES