Monday, December 23, 2024

133 ಎಕರೆ ಪ್ರದೇಶದಲ್ಲಿ ನಿರ್ಮಿಸಿದ ಅತ್ಯಾಧುನಿಕ ಆಸ್ಪತ್ರೆ ಲೋಕಾರ್ಪಣೆ ಮಾಡಿದ ಮೋದಿ.!

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರು ಹರಿಯಾಣದ ಫರಿದಾಬಾದ್‌ನಲ್ಲಿ 6 ಸಾವಿರ ಕೋಟಿ ರೂ.ಗೂ ಅಧಿಕ ವೆಚ್ಚದ 133 ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಅಮೃತ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಿದರು.

ಸಂಪೂರ್ಣ ಸ್ವಯಂಚಾಲಿತ ಪ್ರಯೋಗಾಲಯ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ 2,600 ಹಾಸಿಗೆಯುಳ್ಳ ಖಾಸಗಿ ಆಸ್ಪತ್ರೆಯಾಗಿದೆ. ಈ ಆಸ್ಪತ್ರೆಯನ್ನ ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು. ಈ ವೇಳೆ ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಮತ್ತು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಆರೋಗ್ಯ ಕ್ಷೇತ್ರದಲ್ಲಿ ಈಗಾಗಲೇ ಮೈಲುಗಲ್ಲು ನಿರ್ಮಾಣ ಮಾಡಿದೆ. ಕೊವಿಡ್​ 19 ವಿರುದ್ಧ ಹೋರಾಡಲು ಖಾಸಗಿ ಆಸ್ಪತ್ರೆಗಳು ಸರ್ಕಾರದ ಜತೆಗೆ ಕೈಜೋಡಿಸಿವೆ. ಇದು ಜಾಗೃತಿ ಮೂಡಿಸಲು ಮತ್ತು ವಿಶ್ವದ ಅತಿದೊಡ್ಡ ವ್ಯಾಕ್ಸಿನೇಷನ್ ಡ್ರೈವ್ ಅನ್ನು ಕಾರ್ಯಗತಗೊಳಿಸಲು ಸಹಾಯ ಮಾಡಿದೆ ಎಂದರು.

 

RELATED ARTICLES

Related Articles

TRENDING ARTICLES