Sunday, January 19, 2025

ತುಮಕೂರು ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರೂ: ಸಿಎಂ ಬೊಮ್ಮಾಯಿ

ಬೆಂಗಳೂರು: ತುಮಕೂರು ಬಳಿ ಇಂದು ಬೆಳ್ಳಂ ಬೆಳಿಗ್ಗೆ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮೃತಪಟ್ಟ 9 ಜನರಿಗೆ ತಲಾ 5 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ಸಂಪೂರ್ಣ ಚಿಕಿತ್ಸೆ ವೆಚ್ಚವನ್ನು ರಾಜ್ಯ ಸರ್ಕಾರದಿಂದಲೇ ಭರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತುಮಕೂರು ಬಳಿ 9 ಕೂಲಿ ಕಾರ್ಮಿಕರು ತೀವ್ರವಾದ ರಸ್ತೆ ಅಪಘಾತದಲ್ಲಿ ಅಸುನೀಗಿದ್ದಾರೆ. ಇದು ಬಹಳ ದುರ್ದೈವದ ಸಂಗತಿ. ರಾಯಚೂರಿನಿಂದ ಬೆಂಗಳೂರಿಗೆ ದುಡಿಮೆ ಮಾಡಲು ಬರುತ್ತಿರುವಾಗ ಅವರ ಬದುಕೇ ಇಲ್ಲದಂತಾಗಿರುವುದು ದಿಗ್ಭ್ರಮೆ ಹುಟ್ಟಿಸಿದೆ. ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ.

ಮೃತಪಟ್ಟವರಿಗೆ ಪ್ರಧಾನಮಂತ್ರಿಯವರು ಟ್ವೀಟ್ ಮೂಲಕ ಸಂತಾಪ ಸೂಚಿಸಿ, ಮೃತಪಟ್ಟವರಿಗೆ ಈಗಾಗಲೇ ತಲಾ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ನೀಡಿದ್ದಾರೆ. ಇದಕ್ಕಾಗಿ ಪ್ರಧಾನ ಮಂತ್ರಿಯವರನ್ನು ಅಭಿನಂದಿಸುತ್ತೇನೆ. ಅಪಘಾತದ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

RELATED ARTICLES

Related Articles

TRENDING ARTICLES