ಬೆಂಗಳೂರು: ಆಗಸ್ಟ್ 31 ರಂದು ಗೌರಿ ಗಣೇಶ ಹಬ್ಬದ ಹಿನ್ನಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಸ್ಆರ್ಟಿಸಿ)ವು ಆಗಸ್ಟ್ 30 ಹಾಗೂ 31 ರಂದು ವಿಶೇಷ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿದೆ.
ಗಣಪತಿ ಹಬ್ಬಕ್ಕಾಗಿ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹೋಗುವ ಸಾರ್ವಜನಿಕರ ಅನುಕೂಲಕ್ಕಾಗಿ ಆಗಸ್ಟ್ 30 ಹಾಗೂ 31ರಂದು ಕೆಸ್ಆರ್ಟಿಸಿಯಿಂದ ಸುಮಾರು 500 ಕ್ಕೂ ಹೆಚ್ಚುವರಿ ಬಸ್ಸುಗಳ ಬಿಡಲು ವ್ಯವಸ್ಥೆ ಕಲ್ಪಿಸಲಾಗಿದೆ.
ಮೆಜೆಸ್ಟಿಕ್ ನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಚಿಕ್ಕಮಗಳೂರು, ಶಿವಮೊಗ್ಗ ಹಾಸನ ಕುಂದಾಪುರ, ತಿರುಪತಿ ಹೈದರಾಬಾದ್ ಹಾಗೂ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು ಹುಣಸೂರು ವಿರಾಜಪೇಟೆ ಕುಶಾಲನಗರ, ಶಾಂತಿನಗರ ಬಸ್ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಬಸ್ ಪ್ರಯಾಣಿಸಲಿವೆ.
ಇನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಆನ್ ಲೈನ್ ಮೂಲಕ ಟಿಕೆಟ್ ಬುಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದ್ದು, 5ಕ್ಕೂ ಹೆಚ್ವು ಪ್ರಯಾಣಿಕರು ಮುಂಗಡ ಟಿಕೆಟ್ ಬುಕಿಂಗ್ ಮಾಡಿದಲ್ಲಿ ಶೇ 5 ರಷ್ಟು ರಿಯಾಯಿತಿ ನೀಡಲಾಗಿದೆ. ಹೋಗುವ ಹಾಗೂ ಬರುವ ಟಿಕೆಟ್ ಒಟ್ಟಿಗೆ ಖರೀದಿಸಿದಲ್ಲಿ 10% ರಿಯಾಯಿತಿ ನೀಡಲಾಗುವುದು. ರಾಜ್ಯದ ಹಾಗೂ ಅಂತರಾಜ್ಯದ ವಿವಿಧ ಸ್ಥಳಗಳಿಂದ ಆ. 31ರಂದು ಆಗಮಿಸುವ ಪ್ರಯಾಣಿಕರಿಗೂ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.