Monday, December 23, 2024

ಗಾಳಿಯಲ್ಲಿ ಗುಂಡು ಹೊಡೆದ್ರೆ ಏನು ಮಾಡೋಕೆ ಆಗುತ್ತೆ : ಆರ್ ಅಶೋಕ್

ಬೆಂಗಳೂರು : ಗಣೇಶ ಕೂರಿಸುವ ಸಂಬಂಧ ಇಂದು ಪೊಲೀಸರು, ಬಿಬಿಎಂಪಿ ಅಧಿಕಾರಿಗಳು ಸಭೆ ಮಾಡ್ತಿದ್ದಾರೆ ಎಂದು ವಿಧಾನಸೌಧದಲ್ಲಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಚಾಮರಾಜಪೇಟೆಯಲ್ಲಿ ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನನಗೆ ಆ ರೀತಿಯ ಯಾವುದೇ ಮನವಿಗಳು ಬಂದಿಲ್ಲ. ನಡಿಸಿಗಳಿಗೆ ಕೊಟ್ಟಿದ್ರೆ ಅವರು ಸೂಕ್ತ ಸೂಚನೆ ಕೊಡ್ತಾರೆ. ನಾನು ಮೊದಲ‌ ಬಾರಿಗೆ ಅಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡುವ ನಿರ್ಧಾರ ಮಾಡಿದ್ದೇನೆ. ಮುಂದೆ ಕನ್ನಡ ರಾಜ್ಯೋತ್ಸವ ಮಾಡಲು ಆದೇಶ ಹೊರಡಿಸುವನಿದ್ದೇನೆ ಎಂದರು.

ಅದಲ್ಲದೇ, ನಾನು ಕೂಡ ಗಂಭೀರವಾಗಿ ಆಲೋಚನೆ ಮಾಡ್ತಿದ್ದೇನೆ. ಕಾನೂನು ಸುವ್ಯವಸ್ಥೆ ಬಹಳ ಪ್ರಮುಖ ಆಗಿದೆ. ಗಣೇಶ ಕೂರಿಸುವ ಸಂಬಂಧ ಇಂದು ಪೊಲೀಸರು, ಬಿಬಿಎಂಪಿ ಅಧಿಕಾರಿಗಳು ಸಭೆ ಮಾಡ್ತಿದ್ದಾರೆ. ಚಾಮರಾಜಪೇಟೆಯಲ್ಲಿ ಗಂಭೀರವಾಗಿ ಚಿಂತನೆ ಮಾಡಬೇಕಿದೆ.

ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಯಾವ ಸಂದರ್ಭದಲ್ಲಿ ಏನು‌ ಕ್ರಮ ತಗೊಬೇಕು ಎಂದು ಸೂಕ್ತ ನಿರ್ಧಾರ ಮಾಡ್ತೇವೆ. ಸೂಕ್ತ ಕಾಲ ಸೂಕ್ತ ಸಮಯ ನೋಡಿಕೊಂಡು ತೀರ್ಮಾನ ಮಾಡ್ತೀವಿ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES