ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನವು ಆಟಕ್ಕೆ ಸೀಮಿತವಾಗಿದ್ದು, ಯಥಾಸ್ಥಿತಿ ಈ ಮೈದಾನ ಕಾಪಾಡಿಕೊಳ್ಳಬೇಕೆಂದು ಹೈಕೋರ್ಟ್ ಹೇಳುವ ಮೂಲಕ ಚಾಮರಾಜಪೇಟೆ ಮೈದಾನದಲ್ಲಿ ಈ ಬಾರಿಯ ಗಣೇಶ ಹಬ್ಬಕ್ಕೆ ಅವಕಾಶ ಕಲ್ಪಿಸಿಲ್ಲ.
ರಮ್ಜಾನ್ & ಬಕ್ರೀದ್‌ನಲ್ಲಿ ಮಾತ್ರ ಪಾರ್ಥನೆ ಸಲ್ಲಿಸಲು ಮುಸ್ಲಿಮ್ ಸಮುದಾಯಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನಿಯಮ ಜಾರಿ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದ್ದು, ಬಿಬಿಎಂಪಿಗೆ ಆದೇಶಿಸಿದ ಪೀಠ, ಸೆ.23ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ.
ರಮ್ಜಾನ್ ಮತ್ತು ಬಕ್ರೀದ್ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಮಾತ್ರ ಅವಕಾಶ ನೀಡಲಾಗಿದೆ. ಆದರೆ ಪ್ರತಿ ಶುಕ್ರವಾರದ ಪ್ರಾರ್ಥನೆಗೆ ಅವಕಾಶವಿಲ್ಲ. ಇದನ್ನು ಹುಬ್ಬಳ್ಳಿ ಈದ್ಗಾ ಮೈದಾನದ ರೀತಿಯಲ್ಲಿ ಮಾಡಬೇಡಿ ಎಂದು ಹೈಕೋರ್ಟ್ ಹೇಳಿದೆ.
ಚಾಮರಾಜಪೇಟೆ ಆಟದ ಮೈದಾನದ ಮಾಲೀಕತ್ವವು ಕಂದಾಯ ಇಲಾಖೆಗೆ ಸೇರಿದೆ ಎಂದು ಬಿಬಿಎಂಪಿ ಪಶ್ಚಿಮ ವಲಯ ಜಂಟಿ ಆಯುಕ್ತ ಶ್ರೀನಿವಾಸ್ ಆ. 6ರಂದು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ವಕ್ಫ್ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ನೇತೃತ್ವದ ಪೀಠ ಈ ಆದೇಶ ನೀಡಿದೆ.
ರಮ್ಜಾನ್ & ಬಕ್ರೀದ್‌ನಲ್ಲಿ ಮಾತ್ರ ಪಾರ್ಥನೆ ಸಲ್ಲಿಸಲು ಮುಸ್ಲಿಮ್ ಸಮುದಾಯಕ್ಕೆ ಅವಕಾಶ. ಆದರೆ ಈಗ ಯಥಾಸ್ಥಿತಿ ಕಾಪಾಡಬೇಕೆಂದು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.