Wednesday, January 22, 2025

ಬೆಂಗಳೂರಿನಲ್ಲಿ ಬೈಕ್ ಸವಾರರ ಜೀವ ಹಿಂಡ್ತಿರೋ ರಸ್ತೆ ಗುಂಡಿಗಳು

ಬೆಂಗಳೂರು : ಗುಂಡಿ ತಪ್ಪಿಸಲು ಹೋಗಿ ಸ್ಕಿಡ್ ಆಗಿ ಬಿದ್ದ ಘಟನೆ ಸಿಲಿಕಾನ್​ ಸಿಟಿಯಲ್ಲಿ ನಡೆದಿದೆ.

ನಗರದಲ್ಲಿ ರಸ್ತೆ ಗುಂಡಿಗಳಿಂದ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ. ಮುಖ್ಯ ರಸ್ತೆಯಲ್ಲೇ ಗುಂಡಿ ತಪ್ಪಿಸಲು ಹೋಗಿ ಸ್ಕಿಡ್ ಆಗಿ ಬಿದ್ದಿದ್ದಾರೆ. ಸ್ವಲ್ಪ ಯಾಮಾರಿದ್ರೂ ಹಿಂದಿನ ಗಾಡಿ ಡಿಕ್ಕಿ ಹೊಡೀತಿತ್ತು.

ಕಸ್ತೂರಿ ನಗರದ ಫ್ಲೈಓವರ್ ಮೇಲೆ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಬೈಕ್ ಹಿಂದೆ ಬರ್ತಿದ್ದ ಕಾರು ಚಾಲಕನ ಸಮಯ ಪ್ರಜ್ಞೆಯಿಂದ ಮಹಿಳೆ ಬಚಾವಾಗಿದ್ದಾರೆ. ಮಹಿಳೆ ಸ್ಕಿಡ್ ಆಗಿದ್ದನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿರೋ ಕಾರು ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಮಹಿಳೆ ಪಾರಾಗಿದ್ದಾರೆ.

RELATED ARTICLES

Related Articles

TRENDING ARTICLES