Monday, December 23, 2024

ಶಾಸಕ ಸ್ಥಾನದಿಂದ ಸಿಎಂ ಹೇಮಂತ್ ಸೊರೆನ್ ಅನರ್ಹತೆ

ನವದೆಹಲಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅವರು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ಅವರನ್ನ ಶಾಸಕ ಸ್ಥಾನದಿಂದ ಅನರ್ಹತೆಗೆ ಚುನಾವಣಾ ಆಯೋಗವು ಶಿಫಾರಸು ಮಾಡಿದೆ.

ಅನರ್ಹತೆಯ ಅಧಿಸೂಚನೆಯು ರಾಜ್ಯಪಾಲ ರಮೇಶ್ ಬೈಸ್ ಅವರಿಂದ ಹೊರಬಂದ ತಕ್ಷಣ, ಅವರು ರಾಜೀನಾಮೆ ನೀಡಬೇಕು. ಇಲ್ಲವೇ ನ್ಯಾಯಾಲಯದಿಂದ ಈ ಅಧಿಸೂಚನೆಗೆ ತಡೆಯಾಜ್ಞೆ ಪಡೆಯಬೇಕು ಎಂದು ಚುನಾವಣೆ ಆಯೋಗ ತಿಳಿಸಿದೆ.

ಶಾಸಕ ಸ್ಥಾನದ ಅನರ್ಹತೆಯನ್ನ ರಾಜಭವನ ಇನ್ನೂ ಖಚಿತಪಡಿಸಿಲ್ಲ. ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ರಾಜ್ಯಪಾಲ ರಮೇಶ್ ಬೈಸ್ ಅವರು ನಾಳೆ ಇಸಿಐಗೆ ಶಿಫಾರಸು ಕಳುಹಿಸುವ ಸಾಧ್ಯತೆಯಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

 

RELATED ARTICLES

Related Articles

TRENDING ARTICLES