ಕಾರವಾರ: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಸಿವಿಲ್ ಗುತ್ತಿಗೆದಾರರಿಂದ ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರ ಕಾಮಗಾರಿ ಪೂರ್ಣಗೊಂಡರು ಹಣ ಬಿಡುಗಡೆ ಮಾಡದೆ ಇರುವುದಕ್ಕಾಗಿ ಹಾಗೂ ಗುತ್ತಿಗೆದಾರರಿಂದ 40% ಕಮೀಷನ್ ಪಡೆಯುತ್ತಿದೆ ಎಂದು ಆರೋಪಿಸಿ ಗುತ್ತಿಗೆದಾರರ ಮಾಧವ ನಾಯ್ಕ ಗಂಭೀರ ಆರೋಪ ಮಾಡಿದರು.
ಶಾಸಕರು, ಸಚಿವರು ಅಧಿಕಾರಿಗಳಿಂದಲ್ಲೂ ಭಾರೀ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ. ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರು ಆರೋಪ ಮಾಡುತ್ತಿರುವುದು ಸತ್ಯವಿದೆ. ಕಾರವಾರ ಕ್ಷೇತ್ರದಲ್ಲಿಯೂ ಭೃಷ್ಟಾಚಾರ ತಾಂಡವಾಡುತ್ತಿದೆ ಎಂದರು.
ಇನ್ನು ಕಾಮಗಾರಿ ಪೂರ್ಣಗೊಂಡಿರುವುದನ್ನ ರಾಜ್ಯ ಸರ್ಕಾರ ತಕ್ಷಣ ಬಾಕಿ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ, ಕೆಲವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವ ದಿನ ದೂರವಿಲ್ಲ. ಸ್ಥಳೀಯ ಜನಪ್ರತಿನಿಧಿಗಳಿಂದ ವಿಧಾನಸೌಧದವರೆಗೂ ಕಮೀಷನ್ ವ್ಯವಹಾರ ನಡೆಯುತ್ತಿದೆ ಎಂದು ಜಿಲ್ಲಾ ಗುತ್ತಿಗೆದಾರರ ಸಂಘದ ಜಿಲ್ಲಾ ಉಪಾಧ್ಯಕ್ಷ ಮಾಧವ ನಾಯ್ಕ ಹೇಳಿದರು.