Sunday, December 22, 2024

49ನೇ ಸಿಜೆಐ ಆಗಿ ನ್ಯಾ. ಉದಯ್ ಲಲಿತ್ ಪ್ರಮಾಣವಚನ ಸ್ವೀಕಾರ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ, ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 49ನೇ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಯು.ಯು ಲಲಿತ್ ಅವರಿಗೆ ಇಂದು ಬೆಳಗ್ಗೆ 10:30ಕ್ಕೆ ಪ್ರತಿಜ್ಞಾವಿಧಿ ಬೋಧಿಸಿದರು.

ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಾಗೂ ಹಲವಾರು ಕೇಂದ್ರ ಸಚಿವರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES