Wednesday, January 22, 2025

ಮುರುಘಾ ಮಠದ ಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಜತೆ ಕಿರುಕುಳ ಆರೋಪ, FIR ದಾಖಲು.!

ಬೆಂಗಳೂರು: ಪ್ರತಿಷ್ಟಿತ ಮುರುಘಾ ಮಠದ ಶರಣರ ಸ್ವಾಮೀಜಿಯಿಂದ ನಿರಂತರ ಲೈಂಗಿಕ ದೌರ್ಜನ್ಯ ಜೊತೆಗೆ ಕಿರುಕುಳ ಆರೋಪ ಕೇಳಿಬಂದಿದೆ.

ಮೈಸೂರಿನ ನಿಜರ್​ಬಾದ್​ನಲ್ಲಿ ಮೂರುಘಾ ಮಠದ ಶರಣರ ವಿರುದ್ಧ ದೂರು ದಾಖಲಾಗಿದ್ದು, ಶಿವಮೂರ್ತಿ ಶರಣರ ವಿರುದ್ಧ ವಿದ್ಯಾರ್ಥಿನಿಯರಿಬ್ಬರು ನಗರದ ಮಹಿಳಾ ಸಾಂತ್ವಾನ ಮತ್ತು ಮಕ್ಕಳ ವಸತಿ ಕೇಂದ್ರವಾದ ಒಡನಾಡಿ ಸಂಸ್ಥೆಗೆ ದೂರು ನೀಡಿದ್ದಾರೆ.

ಮಠ ನಡೆಸುವ ಪ್ರೌಢಶಾಲೆಯಲ್ಲೇ ಓದುತ್ತಿರುವ ವಿದ್ಯಾರ್ಥಿನಿಯರಿಂದ ಈ ಆರೋಪ ಕೇಳಿಬಂದಿದ್ದು, ದೂರು ದಾಖಲಿಸಿಕೊಂಡ ಮಕ್ಕಳ ಕಲ್ಯಾಣ ಸಮಿತಿಯು ಬಾಲಕಿಯರ ವಿಚಾರಣೆ ನಡೆಸಲಾಗುತ್ತಿದೆ. ಸ್ವಾಮೀಜಿ ಬಳಿಗೆ ಹೋಗಲು ಒಪ್ಪದಿದ್ದರೆ ಹಾಸ್ಟೆಲ್ ಸಿಬ್ಬಂದಿಯಿಂದ ಅವಾಚ್ಯ ಶಬ್ಧಗಳಿಂದ ನಿಂಧನೆ ಆರೋಪ ಈ ದೂರಿನಲ್ಲಿ ಕೇಳಿಬಂದಿದೆ.

ವಿದ್ಯಾರ್ಥಿನಿಯರನ್ನ ಲೈಗಿಂಕವಾಗಿ ಬಳಸಿಕೊಳ್ಳುವ ಮುನ್ನ ಕುಟುಂಬಸ್ಥರಿಗೆ ಸಹಾಯ ಹಸ್ತ ಮೂಕಾಂತರ ಬಳಸಿಕೊಳ್ಳಲಾಗಿದೆ. ನಂತರ ಲೈಗಿಂಕ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದ್ದರು. ಲೈಂಗಿಕ ಕ್ರಿಯೆಗೆ ಒಪ್ಪದಿದ್ದರೆ ಹಣ್ಣು, ಸಿಹಿಯಲ್ಲಿ ಮತ್ತು ಬರಿಸುವ ಔಷಧಿ ಬೆರೆಸಿ ಅತ್ಯಾಚಾರ ನಡೆಸುತ್ತಾರೆ ಎಂದೂ ದೂರು ದಾಖಲಾಗಿದ್ದು, ಕಿರುಕುಳ ಪ್ರಶ್ನಿಸಿದ ಕಾರಣ ಹಾಸ್ಟೆಲ್ ನಿಂದ ಹೊರಕ್ಕೆ ವಿದ್ಯಾರ್ಥಿಗಳನ್ನು ಹಾಕಲಾಗಿದೆ.

RELATED ARTICLES

Related Articles

TRENDING ARTICLES