Wednesday, January 22, 2025

ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ

ದುಬೈ: ಭಾರತ, ಪಾಕಿಸ್ತಾನ ನಡುವೆ ನಡೆಯಲಿರುವ ಹೈವೋಲ್ಟೆಜ್​  ಏಷ್ಯಾಕಪ್​ನ ಟಿ-20 ಪಂದ್ಯದಲ್ಲಿ ಭಾರತ ಟಾಸ್​ ಗೆದ್ದು ಪೀಲ್ಡಿಂಗ್ ಆಯ್ದುಕೊಂಡಿದೆ.

ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯ, ಪಾಕಿಸ್ತಾನ-ಭಾರತ ನಡುವೆ ಏಷ್ಯಾಕಪ್​​ನಲ್ಲಿ ಒಟ್ಟು ಪಂದ್ಯಗಳು 14 ಆಡಿದೆ. ಇದರಲ್ಲಿ ಭಾರತ 8 ಪಂದ್ಯಗಳಲ್ಲಿ ಜಯಗಳಿಸಿದ್ದರೆ, ಪಾಕ್​​ 5 ಪಂದ್ಯಗಳಲ್ಲಿ ಜಯಗಳಿಸಿದೆ. ಉಭಯ ಎರಡು ತಂಡಗಳು ಭಾರತ ಮತ್ತು ಪಾಕ್​ ಒಂದು ಪಂದ್ಯದಲ್ಲಿ ಡ್ರಾ ಮಾಡಿಕೊಂಡಿವೆ.

ಭಾರತ ತಂಡ ಆಡುವ 11 ರ ಪಟ್ಟಿ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್ (ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಅರ್ಶ್ದೀಪ್ ಸಿಂಗ್

ಪಾಕಿಸ್ತಾನ ತಂಡದ ಆಡುವ 11 ರ ಪಟ್ಟಿ

ಬಾಬರ್ ಅಜಮ್(ನಾಯಕ), ಮೊಹಮ್ಮದ್ ರಿಜ್ವಾನ್(ಕೀಪರ್​​), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾನವಾಜ್ ದಹಾನಿ

RELATED ARTICLES

Related Articles

TRENDING ARTICLES