Friday, November 22, 2024

ಮಳೆಯಿಂದ ಹಾನಿಯಾದ ಮನೆಗಳಿಗೆ 10 ಸಾವಿರ ರೂ. ಪರಿಹಾರ

ಬೆಂಗಳೂರು : ಮಳೆಯಿಂದ ಹಾನಿಯಾದ ಮನೆಗಳಿಗೆ ತಕ್ಷಣ 10 ಸಾವಿರ ಪರಿಹಾರ ನೀಡುವಂತೆ ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆರೆಕಟ್ಟೆಗಳಿರುವ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಮಳೆ ಹಾನಿ ಪರಿಹಾರ ನೀಡಲು ಹಿಂದೆ ಮುಂದೆ ನೋಡಬಾರದು. ಬಿದ್ದಿರುವ ವಿದ್ಯುತ್​ ಕಂಬಗಳನ್ನ 24 ಗಂಟೆಗಳಲ್ಲಿ ದುರಸ್ತಿಗೊಳಿಸುವಂತೆ ಬೆಸ್ಕಾಂಗೆ ಸೂಚನೆ ನೀಡಲಾಗಿದೆ.

ಜಲಾವೃತ ಪ್ರದೇಶಗಳಲ್ಲಿನ ಜನರಿಗೆ ಆಶ್ರಯ ನೀಡಲು ಸೂಚಿಸಲಾಗಿದ್ದು, ಎಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 900 ಕೋಟಿ ರೂ. ಇದೆ. ಬೆಳೆ ಸಮೀಕ್ಷೆ ಮಾಡಿ, ಪರಿಹಾರಕ್ಕೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು. 16 ಜಿಲ್ಲೆಗಳ ಡಿಸಿಗಳ ಜೊತೆ ನಿನ್ನ ಸಭೆಯನ್ನ ಮಾಡಿದ್ದೇನೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಚನೆ ನೀಡಿದ್ದೇನೆ. ಬೆಂಗಳೂರು-ಮೈಸೂರು ಸಂಪರ್ಕಕ್ಕೆ ಪರ್ಯಾಯ ಮಾರ್ಗಕ್ಕೆ ಸೂಚನೆಯನ್ನು ನೀಡಲಾಗಿದೆ.

ನಮ್ಮ ಸಿಎಸ್​ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜತೆ ಸಭೆ ಮಾಡಲಾಗಿದೆ ಎಂದು ಹೇಳಿದರು. ದೆಹಲಿ ಭೇಟಿ ಕುರಿತು ಯಡಿಯೂರಪ್ಪ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ ಮಾಡಿದ್ದು, ಪಕ್ಷದ ಸಂಘಟನೆ ಕುರಿತು, ಪಕ್ಷದ ಕಾರ್ಯಕ್ರಮಗಳ ಕುರಿತು ಬಿಎಸ್​​ವೈ ಜತೆ ಚರ್ಚೆ ಮಾಡಿದ್ದೇನೆ. ರಾಜ್ಯದ 6 ಕಡೆಗಳಲ್ಲಿ ದೊಡ್ಡ ರ್ಯಾಲಿಗಳನ್ನು ಮಾಡುತ್ತೇವೆ. ಸೆ.8ರಂದು ಜನೋತ್ಸವ ಸಮಾವೇಶದ ಕುರಿತು ಮಾತುಕತೆ ಮಾಡಲಾಗಿದೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES