Monday, December 23, 2024

ಹುಬ್ಬಳ್ಳಿಯ ಈದ್ಗಾ‌ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ: ಮೇಯರ್​ ಈರೇಶ

ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ‌ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಒಂದು ಸಂಘಟನೆಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರದ ಮೇಯರ್ ಈರೇಶ ಅಂಚಟಗೇರಿ ಹೇಳಿದ್ದಾರೆ.

ಹುಬ್ಬಳ್ಳಿಯ ಈದ್ಗಾ‌ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗಾಗಿ ಒಟ್ಟು 6 ಹಿಂದೂಪರ‌ ಸಂಘಟನೆಗಳಿಂದ ಮನವಿ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಒಂದು ಸಂಘಟನೆ ಗಣೇಶ್ ಕೂಡಿಸಲು ಅವಕಾಶ ನೀಡಲಾಗಿದೆ ಎಂದರು.

ಒಟ್ಟು 6 ಸಂಘಟನೆಗಳಲ್ಲಿ ಒಂದು ಸಂಘಟನೆಗೆ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿತ್ತು. ಅದರಲ್ಲಿ ಒಂದು ಸಂಘಟನೆಗೆ ಅವಕಾಶ ನೀಡಿದ್ದು, ಒಟ್ಟು ಮೂರು ದಿನಗಳ ಕಾಲ ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅನುವು ಮಾಡಿಕೊಟ್ಟಿದೆ.

RELATED ARTICLES

Related Articles

TRENDING ARTICLES