Wednesday, January 22, 2025

ಗಣೇಶ ಹಬ್ಬವನ್ನ ಸೌಹಾರ್ದತೆಯಿಂದ ಆಚರಿಸೋಣ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಪಾಲಿಕೆ ಒಳ್ಳೆಯ ನಿರ್ಣಯ ತೆಗೆದುಕೊಂಡಿದ್ದಾರೆ. ಈ ನಿರ್ಣಯವನ್ನ ನಾನು ಸ್ವಾಗತ ಮಾಡುತ್ತೇನೆ. ಸೌಹಾರ್ದತೆಯಿಂದ ಗಣೇಶೋತ್ಸವ ಆಚರಣೆ ಮಾಡುವುದು ಸೂಕ್ತ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಇಂದು ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಪಾಲಿಕೆಯಿಂದ ಅವಕಾಶ ಹಿನ್ನೆಲೆ ಈ ಬಗ್ಗೆ ಮಾತನಾಡಿದ ಜೋಶಿ, ಗಣೇಶ್ ಪ್ರತಿಷ್ಠಾಪನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಲು ಎಡಿಜಿಪಿಗೆ ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೂ ಸಹ ನಾನು ಸೂಕ್ತ ಸಲಹೆ ನೀಡಿದ್ದೇನೆ. ಈಗಾಗಲೇ ಎಲ್ಲಾ ರೀತಿಯ ಕಾನೂನು ಸುವ್ಯವಸ್ಥೆಯನ್ನ ಈ ಮೈದಾನದಲ್ಲಿ ಕೈಗೊಳ್ಳಲಾಗಿದೆ ಎಂದರು.

ಅಲೋಕ್ ಕುಮಾರ್ ಅವರ ನೇತೃತ್ವದಲ್ಲಿ ಭದ್ರತೆ ಕಾರ್ಯ ನಡೆಯುತ್ತಿದೆ. ಗಣೇಶ ಹಬ್ಬವನ್ನು ಸೌಹಾರ್ದತೆಯಿಂದ ಮಾಡೋಣ. ಇದರಿಂದ ಕಳೆದುಕೊಳ್ಳುವುದೇನೂ ಇಲ್ಲ. ಎಲ್ಲಾ ಶಾಸಕರು, ಸದಸ್ಯರು, ಅಧಿಕಾರಿಗಳ ಗಮನಕ್ಕೆ ತಂದು ಸಮಿತಿ ಈ ನಿರ್ಧಾರ ಕೈಗೊಂಡಿದೆ. ಜನ ಯಾವುದೇ ಉದ್ವೇಗಕ್ಕೊಳಗಾಗದೇ ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕು ಎಂದು ಜೋಶಿ ಕರೆ ನೀಡಿದರು.

RELATED ARTICLES

Related Articles

TRENDING ARTICLES