Wednesday, January 22, 2025

ಶಾಲೆಗಳು- ಅಂಗನವಾಡಿಗಳಿಗೆ ರಜೆ ಘೋಷಣೆ

ಕೊಪ್ಪಳ ಜಿಲ್ಲೆಯಾದ್ಯಂತ ಸತತ ಮಳೆಯಾದ ಹಿನ್ನೆಲೆ ಶಾಲಾ-ಕಾಲೇಜು ಆವರಣ ಸಂಪೂರ್ಣವಾಗಿ ಕೆರೆಯಂತಾಗಿದೆ. ಈ
ಘಟನೆ ಕೊಪ್ಪಳ ತಾಲೂಕಿನ ಹೊಸ ಬಂಡಿಹರ್ಲಾಪುರ ಗ್ರಾಮದಲ್ಲಿ ನಡೆದಿದೆ.

ಇದರಿಂದ ಶಾಲೆಗಳಿಗೆ ಹಾಗೂ ಅಂಗನವಾಡಿಗಳಿಗೆ ಶಿಕ್ಷಣ ಇಲಾಖೆ, ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ‌ ಇಲಾಖೆ ವತಿಯಿಂದ ರಜೆ ಘೋಷಣೆ ಮಾಡಲಾಗಿದ್ದು, ಇದರಿಂದ ವಾಪಸ್ಸು ಮನೆಗೆ ವಿದ್ಯಾರ್ಥಿಗಳು ತೆರಳುತ್ತಿದ್ದಾರೆ. ಶಾಲಾ-ಕಾಲೇಜು‌ ಕಟ್ಟಡ ಮಳೆಯಿಂದ ಸಂಪೂರ್ಣ ಜಲಾವೃತವಾಗಿದೆ. ನೀರನ್ನು ಹೊರಹಾಕಲು ಗ್ರಾಮಸ್ಥರ ಹರಸಾಹಸ ಪಟ್ಟಿದ್ದಾರೆ. ತಾಲೂಕಿನಲ್ಲಿ‌ ಮಳೆ ಪ್ರಮಾಣ ನೋಡಿಕೊಂಡು ರಜೆ ನೀಡಲು ಸೂಚನೆ ನೀಡಲಾಗಿದೆ.

RELATED ARTICLES

Related Articles

TRENDING ARTICLES