Monday, December 23, 2024

ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ನಿಧನ, ನಿನ್ನೆ ಅಂತ್ಯಕ್ರಿಯೆ

ನವದೆಹಲಿ: ರಾಷ್ಟ್ರೀಯ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಅಗಸ್ಟ್​ 27 ರಂದು ನಿಧನರಾಗಿದ್ದರು, ನಿನ್ನೆ ಇಟಲಿಯಲ್ಲಿ ಅಂತ್ಯಕ್ರಿಯೆ ನೆರವೇರಿದೆ.

ಅ.27 ರಂದು ಸೋನಿಯಾ ಗಾಂಧಿ ಅವರ ತಾಯಿ ಪಾವೋಲಾ ಮೈನೋ(90) ಅವರು ನಿಧನರಾದ್ದರು. ಈ ಹಿನ್ನಲೆಯಲ್ಲಿ ನಿನ್ನೆ(ಮಂಗಳವಾರ) ಮೈನೋ ಅವರ ಅಂತ್ಯಕ್ರಿಯೆ ಕಾರ್ಯ ಮುಗಿಸಲಾಗಿದೆ.

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೊ ಅವರು ಶನಿವಾರ (ಆಗಸ್ಟ್ 27) ಇಟಲಿಯ ತಮ್ಮ ಮನೆಯಲ್ಲಿ ನಿಧನರಾದರು ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಆಗಸ್ಟ್ 23 ರಂದು ಪಾವೋಲಾ ಮೈನೋ(90) ಅವರು ಅನಾರೋಗ್ಯದ ಹಿನ್ನಲೆಯಲ್ಲಿ ಸೋನಿಯಾ ಗಾಂಧಿ ಅವರು ಭೇಟಿ ಮಾಡಲು ತೆರಳಿದ್ದರು. ಸೋನಿಯಾ ಗಾಂಧಿ, ಅವರ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಈಗಾಗಲೇ ವಿದೇಶದಲ್ಲಿದ್ದು, ಮೈನೋ ಅವರ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.

 

RELATED ARTICLES

Related Articles

TRENDING ARTICLES