Sunday, November 17, 2024

ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರು ಸಿಟಿ ರೌಂಡ್ಸ್​ನಲ್ಲಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಬೆಂಬಿಡದೆ ಮಳೆಯಾಗುತ್ತಿದ್ದು, ಇಲಾಖೆಗಳ ನಡುವೆ ಸಮನ್ವಯ ಕೊರತೆ ಇದೆ. ಹೀಗಾಗಿ ಬೆಂಗಳೂರಿನಲ್ಲಿ ಸಮಸ್ಯೆ ಆಗ್ತಿದೆ. ಸಮನ್ವಯ ಕಾಪಾಡಾದ ಅಧಿಕಾರಿಗಳ ವಿರುದ್ಧ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿ ಜಲಮಂಡಳಿ ಅಧಿಕಾರಿಗಳಿಗೆ ಸಿಎಂ ಕ್ಲಾಸ್ ತೆಗೆದುಕೊಂಡರು.

ತ್ಯಾಜ್ಯ ನಿರ್ವಹಣೆ ಘಟಕಗಳ ವಿಚಾರದಲ್ಲಿ ಜಲಮಂಡಳಿ ನಿರ್ಲಕ್ಷ್ಯ ತೋರುತ್ತಿದೆ. ತ್ಯಾಜ್ಯ ನೀರು ಎಲ್ಲಿಯೂ ಹೊರಗಡೆ ಬಾರದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜಕಾಲುವೆ ಒತ್ತುವರಿ ಮಾಡಲಾಗಿದೆ ಆದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಇಂಜಿನಿಯರಗಳು ತಮ್ಮ ಕಾರ್ಯಪ್ರವೃತಿಯನ್ನ ಬದಲಾವಣೆ ಮಾಡಕೊಳ್ಳಬೇಕು. ರಾಜಕಾಲುವೆ ಮೇಲೆ ರಸ್ತೆ ಮಾಡಿದ್ದಾರೆ ಬಿಲ್ಡಿಂಗ್ ಕಟ್ಟಿದ್ದಾರೆ. ದುಡ್ಡಿನ ವ್ಯವಹಾರ ಮಾಡಿಕೊಂಡು ಸುಮ್ಮನೆ ಆಗಿದೀರಾ, ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು. ಒತ್ತುವರಿ ತೆರವು ಕೂಡಲೇ ಮಾಡಲೇಬೇಕು. ನಮ್ಮ ಸರ್ಕಾರ ಒತ್ತುವರಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಅಧಿಕಾರಿಗಳ ವಿರುದ್ಧ ಸಿಎಂ ಬೊಮ್ಮಾಯಿ ಗರಂ ಆಗಿ ಸೂಚಿಸಿದರು.

RELATED ARTICLES

Related Articles

TRENDING ARTICLES