Thursday, January 23, 2025

ಬಿಜೆಪಿ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ

ಮಂಗಳೂರು : ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಮುಂದಿನ ಬಾರಿಯೂ ಅಧಿಕಾರ ಉಳಿಸಿಕೊಳ್ಳಲು ಭಾರೀ ಕಸರತ್ತು ಮಾಡುತ್ತಿದೆ. ಇದರ ಮುಂದುವರಿದ ಭಾಗ ಎಂಬಂತೆ ಸರಕಾರಿ ಕಾರ್ಯಕ್ರಮದ ನೆಪದಲ್ಲಿ ಕರಾವಳಿಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಅಭೂತಪೂರ್ವ ಎನ್ನುವ ರೀತಿ ಈ ಕಾರ್ಯಕ್ರಮ ನಡೆಸಲು ಎಲ್ಲಾ ಸಿದ್ಧತೆ ನಡೆದಿದೆ. ಸೆ.2ರಂದು ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು, ಸ್ವಸಹಾಯ ಗುಂಪುಗಳ ಸದಸ್ಯರನ್ನು ಕರೆತರಲು ಒಂದೂವರೆ ಸಾವಿರ ಬಸ್ ಗಳನ್ನು ಬುಕ್ ಮಾಡಲಾಗಿದೆ. ಅಲ್ಲದೆ,ಎರಡು ಜಿಲ್ಲೆಗಳ ಸರಕಾರಿ ನೌಕರರು, ಬ್ಯಾಂಕ್ ನೌಕರರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ಎನ್ಎಂಪಿಟಿ ಮತ್ತು ಎಂಆರ್ ಪಿಎಲ್ ವತಿಯಿಂದ ಕಾರ್ಯಕ್ರಮ ನಡೆಸುತ್ತಿದ್ದರೂ, ಜಿಲ್ಲಾಡಳಿತ ಇಡೀ ಕಾರ್ಯಕ್ರಮದ ಉಸ್ತುವಾರಿ ಹೊತ್ತುಕೊಂಡಿದೆ. ಜನರನ್ನು ಕರೆತರಲು ಬಿಜೆಪಿಯ ಆಯಾ ಭಾಗದ ನಾಯಕರು ಹೊಣೆ ಹೊತ್ತುಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದ್ದು ಕಡಲ ನಗರಿ ಆವತ್ತು ಪೂರ್ತಿ ಸ್ತಬ್ಧವಾಗುವ ನಿರೀಕ್ಷೆಯಿದೆ. ಕಾರ್ಯಕ್ರಮ ರಾಷ್ಟ್ರೀಯ ಹೆದ್ದಾರಿ 66ರ ಕುಳೂರಿನಲ್ಲಿ ನಡೆಯುವ ಕಾರಣ ಇಡೀ ದಿನ ಐದು ಕಿಮೀ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗುತ್ತಿದೆ. ಮುಂಬೈ, ಕಾರವಾರ- ಮಂಗಳೂರು – ಕೇರಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು ಇಡೀ ದಿನ ಬಂದ್ ಮಾಡುವುದರಿಂದ ಸಾಮಾನ್ಯ ಜನರಿಗೆ ಸಂಕಷ್ಟ ಎದುರಾಗಲಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಹೊಸ ಬಾಂಬ್ ಸಿಡಿಸಿದೆ.

RELATED ARTICLES

Related Articles

TRENDING ARTICLES