Sunday, February 2, 2025

ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಗುಡ್​ ಬೈ ಹೇಳಿದ ಮಾಜಿ ಸಂಸದ

ಬೆಂಗಳೂರು: ಮಾಜಿ ಸಂಸದ ಎಸ್​.ಪಿ ಮುದ್ದಹನುಮೇಗೌಡ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.

ಕಳೆದ 2019 ರ ಲೋಕಸಭಾ ಟಿಕೆಟ್ ತಪ್ಪಿದ ಬಳಿಕ ಪಕ್ಷದಲ್ಲಿ ಸರಿಯಾದ ಮಾನ್ಯತೆ ನೀಡಿಲ್ಲ ಈ ಕಾರಣಕ್ಕೆ ಹಲವು ತಿಂಗಳಿಂದ ಕಾಂಗ್ರೆಸ್​ ಪಕ್ಷದ ವಿರುದ್ಧ ಬಂಡಾಯ ಎಂದಿದ್ದರು. ಹೀಗಾಗಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಪತ್ರದ ಮೂಲಕ ಮುದ್ದಹನುಮೇಗೌಡ ಅವರು ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.

ತುಮಕೂರು ನಗರ, ಗ್ರಾಮಾಂತರ, ಕುಣಿಗಲ್ ಮತ್ತು ಗುಬ್ಬಿ ಕ್ಷೇತ್ರದಲ್ಲಿ ಮುದ್ದಹನುಮೇಗೌಡ ಪ್ರಭಾವಿಯಾಗಿದ್ದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕುಣಿಗಲ್​ ಮತ ಕ್ಷೇತ್ರದಿಂದ ಸ್ಪರ್ಧೆ ಮಾಡುವುದ ಖಚಿತ ಎಂದು ಹೇಳಲಾಗಿತ್ತು. ಆದರೆ, ಟಿಕೆಟ್​ ಸಿಗುವುದಿಲ್ಲ ಎಂದು ಸ್ಪಷ್ಟವಾದ ಬಳಿಕ ಬದಲಾದ ರಾಜಕೀಯದಲ್ಲಿ ಮುದ್ದಹನುಮೇಗೌಡ ಕಾಂಗ್ರೆಸ್​ ಪಕ್ಷಕ್ಕೆ ಗುಡ್​ ಬೈ ಹೇಳಿದ್ದಾರೆ.

ತಮ್ಮನ್ನ ಕಾಂಗ್ರೆಸ್​ ಪಕ್ಷದಲ್ಲಿ ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಬಹಿರಂಗವಾಗಿ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದರು.

 

 

RELATED ARTICLES

Related Articles

TRENDING ARTICLES