Thursday, December 26, 2024

ಕಾನೂನು ಪ್ರಕಾರ ಎಲ್ಲಾ ನಡೆಯುತ್ತದೆ : ಸಿಎಂ ಬೊಮ್ಮಾಯಿ

ಮಂಗಳೂರು : ಮುರುಘಾ ಶ್ರೀಗಳ ಬಂಧನ ವಿಚಾರವಾಗಿ ಈ ಸಂದರ್ಭದಲ್ಲಿ ಮಾತನಾಡುವುದು, ಉತ್ತರ ಕೊಡುವುದು ಸರಿಯಲ್ಲ, ಕಾನೂನು ಪ್ರಕಾರವಾಗಿ ಎಲ್ಲಾ ನಡೆಯುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪೊಲೀಸರಿಗೆ ನಾವು ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಹಾಗಾಗಿ ಕಾನೂನು ಪ್ರಕಾರವಾಗಿ ಎಲ್ಲವೂ ನಡೆಯುತ್ತದೆ. ಮುರುಘಾ ಶರಣರ ಬಂಧನ ಬಗ್ಗೆ ಈ ಹೊತ್ತಿನಲ್ಲಿ ಮಾತನಾಡುವುದು ಸರಿಯಲ್ಲ ಎಂದಷ್ಟೇ ಹೇಳಿದರು.

ಇಂದು ಮಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆ ಬೆಳಗ್ಗೆಯೇ ಮಂಗಳೂರಿಗೆ ತೆರಳಿದ್ದಾರೆ. ಇದಕ್ಕೂ ಮುನ್ನ ಬೆಳ್ಳಂಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ, ಮುರುಘಾ ಶರಣರ ಬಂಧನ ಬಗ್ಗೆ ಮಾಹಿತಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES