ಹಾವೇರಿ: ಈ ವರ್ಷ ಮಳೆ ಹೆಚ್ಚಾಗಿ, ವ್ಯಾಪಕ ಪ್ರಮಾಣದಲ್ಲಿ ಬೆಳೆಗೆ ಹಾನಿಯಾಗಿದ್ದರೂ ರೈತರು ಎದೆಗುಂದದೇ ಕೃಷಿ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.
ಜಿಲ್ಲೆಯ ಹಿರೇಕೆರೂರ್ ತಾಲ್ಲೂಕು ಹಂಸಭಾವಿ ಬಳಿ ಇಂದು ಮಳೆಯಿಂದ ಹಾನಿಗೊಳಗಾದ ಕೃಷಿ ಜಮೀನನ್ನು ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರೊಂದಿಗೆ ಅವರು ಮಾತನಾಡಿದರು.
ಬೆಳೆಹಾನಿ ಸಮೀಕ್ಷೆ ನಡೆಸಿ ಈ ಬಗ್ಗೆ ವರದಿ ನೀಡಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು ಸಮೀಕ್ಷೆ ಮುಗಿದ ನಂತರ ಸರ್ಕಾರ, ಬೆಳೆ ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ಪರಿಹಾರ ವಿತರಿಸಲಿದೆ ಎಂದರು.