Wednesday, January 22, 2025

ಮುರುಘಾಶ್ರೀ ಕೇಸ್​ನಲ್ಲಿ ಸರ್ಕಾರ ಎಂಟ್ರಿ ಕೊಡಲ್ಲ: ಸಚಿವ ಆರ್​. ಅಶೋಕ್​​

ಬೆಂಗಳೂರು: ಮುರುಘಾ ಮಠದ ಶರಣರ ಪೋಕ್ಸೊ ಕೇಸ್​ನ ಬಂಧನದಲ್ಲಿ ರಾಜ್ಯ ಸರ್ಕಾರ ಎಂಟ್ರಿ ಕೊಡುವುದಿಲ್ಲ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಮುರುಘಾ ಶ್ರೀಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಮಠಗಳ ಬಗ್ಗೆ ಗೌರವ ಇರುತ್ತದೆ. ಮಠಗಳಲ್ಲಿ ಈ ರೀತಿ ಆಗಬಾರದು. ಕಾನೂನು ಪ್ರಕಾರ ಪೊಲೀಸರು ಕೆಲಸ ಮಾಡುತ್ತಾರೆ. ಕಾನೂನಿನಿಂದ ಏನು ಕ್ರಮ ಕೈಗೊಳ್ಳಬೇಕು ಕೈಗೊಳ್ಳಲಾಗುತ್ತದೆ ಎಂದರು.

ರಾಜ್ಯ ಸರ್ಕಾರ ಈ ಕೇಸ್​ನಲ್ಲಿ ಎಂಟ್ರಿ ಕೊಡುವುದಿಲ್ಲ. ಕಾನೂನು ತನ್ನದೇ ಆದ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿದೆ. ಈ ನೆಲದ ಕಾನೂನು ಏನಿದೆಯೋ ಅದನ್ನ ಸರ್ಕಾರ ಪಾಲನೆ ಮಾಡಲಿದೆ. ಪೊಲೀಸರು ಕಾನೂನಿನ ಅಡಿಯಲ್ಲಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES