Sunday, December 22, 2024

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಕಾಹು ಬಿಜಾಪುರ ನಿಧನ

ವಿಜಯಪುರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಕಾಹು ಬಿಜಾಪುರ (88) ಅವರು ವಯೋ ಸಹಜ ಕಾಯಿಲೆಯಿಂದ ನಿಧನ ಹೊಂದಿದ್ದಾರೆ.

ವಿಜಯಪುರ ಜಿಲ್ಲೆಯ ಗೊಳಸಂಗಿ ಗ್ರಾಮದ ಕಾಸೀಮಸಾಬ ಹುಸೇನಸಾಬ ಬಿಜಾಪುರ, ಜಾನಪದ ಸಾಹಿತ್ಯದಲ್ಲಿ ಕೃಷಿ ಮಾಡಿ ಕಾಹು ಎಂದೇ ಹೆಸರುವಾಸಿವಾಗಿದ್ದರು. ಫೆಬ್ರವರಿ 4, 1935 ರಂದು ಕಾಹು ಜನಿಸಿದ್ದರು.

ವಿಜಯಪುರ ಜಿಲ್ಲೆಯ ಗೊಳಸಂಗಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನೆರೇವೆರಿತು. 2003 ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಂದ ಕಾಹು ಬಿಜಾಪುರ ಅವರು ರಾಜ್ಯೋತ್ಸವ ಪ್ರಶಸ್ತಿಯನ್ನ ಸ್ವೀಕರಿಸಿದ್ದರು.

ಇತ್ತೀಚಿಗೆ ಕಾಹು ಅವರಿಗೆ ಮೆದುಳಿಗೆ ಪಾರ್ಶ್ವವಾಯುವಾಗಿತ್ತು. ಮೃತ ಕಾಹು ಅವರಿಗೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಹೊಂದಿದ್ದರು. ಇನ್ನು ಕಾಹು ಅಗಲಿಕೆಗೆ ಜಾನಪದ ಸಾಹಿತಿಗಳು ಜನಪ್ರತಿನಿಧಿಗಳಿಂದ ತೀವ್ರ ಸಂತಾಪ ಸೂಚಿಸಲಾಯಿತು.

RELATED ARTICLES

Related Articles

TRENDING ARTICLES