Monday, December 23, 2024

ನಾಳೆ ಮತ್ತೊಮ್ಮೆ ಭಾರತ-ಪಾಕಿಸ್ತಾನ ಮುಖಾಮುಖಿ

ನವದೆಹಲಿ; ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ‘ಸೂಪರ್ 4’ ಹಂತದಲ್ಲಿ ಮತ್ತೆ ಮುಖಾಮುಖಿಯಾಗಲಿವೆ.

ಕಳೆದ ಭಾನುವಾರ ನಡೆದ ‘ಎ’ ಗುಂಪಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗವು ಪಾಕಿಸ್ತಾನ ತಂಡವನ್ನು ಐದು ವಿಕೆಟ್ ಅಂತರದಿಂದ ಸೋತಿತ್ತು. ಶುಕ್ರವಾರ ನಡೆದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಹಾಂಗ್‌ಕಾಂಗ್ ವಿರುದ್ಧ ಪಾಕಿಸ್ತಾನ ದಾಖಲೆಯ 155 ರನ್ ಅಂತರದ ಗೆಲುವು ದಾಖಲಿಸಿತು. ಇದರೊಂದಿಗೆ ಭಾನುವಾರ ನಡೆಯಲಿರುವ ಸೂಪರ್‌ 4 ಹಂತದ ಪಂದ್ಯದಲ್ಲಿ ಭಾರತ ತಂಡವನ್ನು ಪಾಕಿಸ್ತಾನ ಎದುರಿಸಲಿದೆ.

ಎ ಗುಂಪಿನಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಗುಂಪಿನ ಅಗ್ರಸ್ಥಾನಿಯಾಗಿ ಸೂಪರ್ 4 ಹಂತಕ್ಕೆ ಲಗ್ಗೆಯಿಟ್ಟಿದೆ. ಹಾಂಗ್‌ಕಾಂಗ್ ಎರಡು ಪಂದ್ಯಗಳಲ್ಲಿ ಸೋತು ಟೂರ್ನಿಯಿಂದ ನಿರ್ಗಮಿಸಿದೆ.

RELATED ARTICLES

Related Articles

TRENDING ARTICLES