Friday, November 22, 2024

ದೇಶದಲ್ಲಿ ಶಿಕ್ಷಕರ ಕೊಡುಗೆ ಅನನ್ಯ- ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ; ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿ ಅಂಗವಾಗಿ ರಾಷ್ಟ್ರಪತಿ ಭವನದಲ್ಲಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ನಮನ ಸಲ್ಲಿಸಿದರು.

ಈ ಬಗ್ಗೆ ಟ್ವೀಟ್​ ಮಾಡಿದ ಅವರು, ಮಾತೃಭಾಷೆಯಲ್ಲಿ ಶಿಕ್ಷಣ ನೀಡಿಕೆ, ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಹೊರತೆಗೆಯಲು ಪ್ರಮುಖ ಕ್ರಮವಾಗಲಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಈ ಅಂಶಕ್ಕೆ ಹೆಚ್ಚಿನ ಒತ್ತು ನೀಡುತ್ತದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿಪ್ರಾಯಪಟ್ಟರು.

ಶಿಕ್ಷಕರು ಕೇವಲ ವಿಷಯಗಳನ್ನು ಮಾತ್ರ ಕಲಿಸುವುದಿಲ್ಲ, ಜೀವನದಲ್ಲಿ ಎದುರಾಗುವ ವಿವಿಧ ಸವಾಲುಗಳನ್ನು ಹೇಗೆ ಎದುರಿಸಬೇಕು ಎಂಬ ಬಗ್ಗೆಯೂ ವಿದ್ಯಾರ್ಥಿಗಳಿಗೆ ನೆರವಾಗಲಿದ್ದಾರೆ.

ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು ನೀಡುವ ಉದ್ದೇಶವೆಂದರೆ ದೇಶದಲ್ಲಿ ಶಿಕ್ಷಕರ ಅನನ್ಯ ಕೊಡುಗೆ ಸ್ಮರಿಸುವುದು ಮತ್ತು ತಮ್ಮ ಬದ್ಧತೆ ಮತ್ತು ಉದ್ಯಮದ ಮೂಲಕ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಿಸುವುದಲ್ಲದೆ ವಿದ್ಯಾರ್ಥಿಗಳ ಜೀವನವನ್ನು ಶ್ರೀಮಂತಗೊಳಿಸುವ ಶಿಕ್ಷಕರನ್ನು ಗೌರವಿಸುವುದಾಗಿದೆ ಎಂದು ಮುರ್ಮು ಹೇಳಿದರು.

 

RELATED ARTICLES

Related Articles

TRENDING ARTICLES