Wednesday, January 22, 2025

ಕೆರೆ, ರಾಜಕಾಲುವೆ ಒತ್ತುವರಿಯಾಗಿ ಮನೆ ನಿರ್ಮಾಣ, ಇದ್ರಿಂದ ಅವಾಂತರ ಸೃಷ್ಟಿ

ಮೈಸೂರು: ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದದಲ್ಲಿ ಮಹಾಜನ್ ವರದಿಯೇ ಅಂತಿಮವಾಗಿದೆ. ಗಡಿ ವಿವಾದ ಬಗ್ಗೆ ಸುಪ್ರೀಂನಲ್ಲಿ ವಿಚಾರಣೆ ನಡೆಯುತ್ತಿದೆ. ನ್ಯಾಯಾಂಗ ತೀರ್ಪು ಪುನರ್ ವಿಮರ್ಶೆಗೆ ಮಹಾರಾಷ್ಟ್ರದವರು ಕೇಳಿದ್ದಾರೆ. ನಮ್ಮ ಸರ್ಕಾರದವರೂ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಇನ್ನು ಬೆಂಗಳೂರಿನಲ್ಲಿ ಮಳೆಯಿಂದ ಹಾನಿ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ವೈಫಲ್ಯದಿಂದ ಬೆಂಗಳೂರಿನ ಜನರು ಅವಾಂತರವನ್ನ ಎದುರಿಸುತ್ತಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರವೇ ನೇರ ಕಾರಣವಾಗಿದೆ.

ಬೆಂಗಳೂರಿನ ಕೆರೆ, ರಾಜಕಾಲುವೆ ಒತ್ತುವರಿ ಮಾಡಿ ಮನೆ ಕಟ್ಟಿದ್ದಾರೆ. ಇದರಿಂದ ಮನೆ, ರಸ್ತೆಗಳಿಗೆ ನೀರು ನುಗ್ಗುತ್ತಿದೆ. ನಮ್ಮ ಸರ್ಕಾರ ಇದ್ದಾಗ ರಾಜಕಾಲುವೆ ಒತ್ತುವರಿ ತೆರವಿಗೆ ಚಾಲನೆ‌ ಕೊಟ್ಟಿದ್ದೆವು. ಬಿಜೆಪಿ ಅವರು ಅಧಿಕಾರಕ್ಕೆ ಬಂದು ಮೂರೂವರೆ ವರ್ಷವಾದರೂ ಏನು ಮಾಡಲಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದರು.

ಸರ್ಕಾರ ಬೆಂಗಳೂರಿನ ಐಟಿ,ಬಿಟಿ ಕಂಪನಿಗಳಿಗೆ ಸರಿಯಾದ ಮೂಲಸೌಕರ್ಯ ಕಲ್ಪಿಸಬೇಕು. ಈ ಸರ್ಕಾರದವರು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಇದರಿಂದಾಗಿ ಐಟಿ, ಬಿಟಿ ಕಂಪನಿಗಳು ಬೇರೆಡೆ ಹೋಗುತ್ತಿದ್ದಾರೆ ಎಂದು ಮೈಸೂರಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದರು.

RELATED ARTICLES

Related Articles

TRENDING ARTICLES