Saturday, April 20, 2024

4 ದಿನ ರಾಜ್ಯಾದ್ಯಂತ ಮಳೆ ಮುಂದುವರಿಕೆ

ಬೆಂಗಳೂರು : ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು ಈ ಮಧ್ಯೆ ಮುಂದಿನ 4 ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈರುತ್ಯ ಮನ್ಸೂನ್ ಚುರುಕು ಆಗಿರುವುದು ಮತ್ತು ಕನ್ಯಾಕುಮಾರಿಯಲ್ಲಿ ಕಾಣಿಸಿಕೊಳ್ಳುತ್ತಿರುವ ಮೈಲ್ಮೈ ಸುಳಿಗಾಳಿಯಿಂದ ಮಳೆಯಾಗುತ್ತಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಬಳ್ಳಾರಿಯಲ್ಲಿ ಮಳೆಯಾಗಲಿದೆ. ಆದರಲ್ಲೂ ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಆಗಲಿದೆ. ಬೀದರ್, ಕೊಪ್ಪಳ, ಕಲಬುರಗಿ, ಯಾದಗಿರಿ, ಗದಗ, ಬಾಗಲಕೋಟೆ, ರಾಯಚೂರು ಜಿಲ್ಲೆ ಹೊರತುಪಡಿಸಿ ಉಳಿದೆಲ್ಲಾ ಕಡೆ ಮಳೆಯಾಗಲಿದೆ. ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ. ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ.

RELATED ARTICLES

Related Articles

TRENDING ARTICLES