Friday, September 13, 2024

ಸಾವಿತ್ರಿಬಾಯಿ ಫುಲೆ ಪಠ್ಯ ಕೈ ಬಿಟ್ಟಿಲ್ಲ : ಬಿ.ಸಿ ನಾಗೇಶ್

ಬೆಂಗಳೂರು: ಏಳನೇ ತರಗತಿ ಕನ್ನಡ ಪಠ್ಯದಲ್ಲಿ  ಸಾವಿತ್ರಿಬಾಯಿ ಫುಲೆ ಪಠ್ಯ ಇದೆ. ಕೈ ಬಿಟ್ಟಿಲ್ಲ. ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಮತ್ತು ಅದೇ ಸತ್ಯ ಎಂದು ಜನರನ್ನು ನಂಬಿಸಲು ಯತ್ನಿಸುವುದು ಕಾಂಗ್ರೆಸ್ಸಿಗರ ದಿನಚರಿಯಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಮಹಿಳೆಯರಿಗೆ, ಶೋಷಿತರಿಗೆ ಅಕ್ಷರದ ದಾಸೋಹ ನಡೆಸಿದ, “ಅಕ್ಷರದವ್ವ” ಎಂದೇ ಖ್ಯಾತರಾದ ಸಾವಿತ್ರಿಬಾಯಿ ಫುಲೆ ಅವರ ಪಠ್ಯವನ್ನು ಕೈಬಿಟ್ಟ ಸರ್ಕಾರ ಪಠ್ಯಪುಸ್ತಕಗಳಲ್ಲಿ ಬುಲ್ ಬುಲ್ ಹಕ್ಕಿ ಹಾರಿಸುತ್ತಿದೆ! ಶಿಕ್ಷಣ ವಿರೋಧಿಯಾಗಿ ವರ್ತಿಸಿದ್ದು, ಮಹನೀಯರಿಗೆ ಅವಮಾನಿಸಿದ್ದು ನಿಮ್ಮ ಒಂದು ವರ್ಷದ ಸಾಧನೆಯೇ ಬೊಮ್ಮಾಯಿ ಅವರೇ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿತ್ತು. ಇದಕ್ಕೆ ತಿರುಗೇಟು ನೀಡಿರುವ ಬಿ.ಸಿ ನಾಗೇಶ್, ಸಾವಿತ್ರಿಬಾಯಿ ಫುಲೆ ಪಠ್ಯ ಕೈ ಬಿಟ್ಟಿಲ್ಲ ಎಂದರು.

ಅದಲ್ಲದೇ, ಏಳನೇ ತರಗತಿ ಕನ್ನಡ ಪಠ್ಯದಲ್ಲಿ ಸಾವಿತ್ರಿ ಬಾಯಿ ಫುಲೆ ಪಠ್ಯ ಇದೆ. ಕಾಂಗ್ರೆಸ್ ಸುಳ್ಳು ಹಬ್ಬಿಸೋದು ಕೆಲಸ ಆಗಿದೆ. ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಮತ್ತು ಅದೇ ಸತ್ಯ ಎಂದು ಜನರನ್ನು ನಂಬಿಸಲು ಯತ್ನಿಸುವುದು ಕಾಂಗ್ರೆಸ್ಸಿಗರ ದಿನಚರಿಯಾಗಿದೆ. ಸತ್ಯ ಕಣ್ಣ ಮುಂದಿರುವಾಗ ನಿಮ್ಮ ಹಸಿ ಸುಳ್ಳುಗಳನ್ನು ಜನರು ನಂಬಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

RELATED ARTICLES

Related Articles

TRENDING ARTICLES