Sunday, January 19, 2025

ಮೋದಿ ಅಧಿಕಾರದಲ್ಲಿ ಇರೋವರೆಗೂ ಕಾಂಗ್ರೆಸ್​ ಅಧಿಕಾರಕ್ಕೆ ಬರಲ್ಲ; ಯಡಿಯೂರಪ್ಪ

ದೊಡ್ಡಬಳ್ಳಾಪುರ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತದೆ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಈ ಹಿಂದೆಯೇ ನಾನು ಸಿದ್ದರಾಮಯ್ಯನವರಿಗೆ ಸದನದಲ್ಲಿ ಉತ್ತರ ಕೊಟ್ಟಿದ್ದೇನೆ. ಈಗ ಮತ್ತೊಮ್ಮೆ ಹೇಳುತ್ತಿದ್ದೇನೆ ದೇಶದಲ್ಲಿ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿಯಾಗಿರುವವರೆಗೆ ಕಾಂಗ್ರೆಸ್​ನನ್ನು ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂದು ಶಪಥ ಮಾಡುತ್ತಿದ್ದೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.

ಇಂದು ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಪಕ್ಷದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ, ಸಿದ್ದರಾಮಯ್ಯನವರು ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಬೆಂಗಳೂರಿನಲ್ಲಿ ಬೋಟ್​ನಲ್ಲಿ ಓಡಾಡೋ ಪರಿಸ್ಥಿತಿ ಬಂದಿದೆ ಎಂದಾದರೆ ಯಾವ ಪ್ರಮಾಣದಲ್ಲಿ ಮಳೆ ಬಿದ್ದಿದೆ ಎಂಬ ಅರಿವು ಅವರಿಗಿರಬೇಕು. ಹಣಬಲ, ತೋಳ್ಬಲ, ಹೆಂಡಬಲದಿಂದ ಅಧಿಕಾರಕ್ಕೆ ಬರಬಹುದೆಂಬ ಭ್ರಮೆಯಲ್ಲಿದ್ದ ಕಾಂಗ್ರೆಸ್​ನವರಿಗೆ ಅದು ಸಾಧ್ಯವಿಲ್ಲ ಎಂದು ಜನರು ತೋರಿಸಿಕೊಟ್ಟಿದ್ದಾರೆ ಎಂದರು.

ಸಚಿವ ಸುಧಾಕರ್​ ಪರಿಶ್ರಮದಿಂದ ಈ ಭಾಗದಲ್ಲಿ ಬಿಜೆಪಿ ಪಕ್ಷಕ್ಕೆ ಬಲ ಬಂದಿದ್ದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ನನ್ನ ಜೀವನ ಬಹಳ ಸಮಯ ರೈತರಿಗೆ ಮೀಸಲಿಟ್ಟಿದ್ದೇನೆ. ನೇಕಾರರು, ರೈತರಿಗೆ ನಮ್ಮ ಸರ್ಕಾರದಿಂದ ಸಾಕಷ್ಟು ನೆರವು ನೀಡಿದ್ದೇವೆ ಎಂದು ಯಡಿಯೂರಪ್ಪ ತಿಳಿಸಿದರು.

RELATED ARTICLES

Related Articles

TRENDING ARTICLES