Wednesday, January 22, 2025

ಈ ಬಾರಿಯ ಮೈಸೂರು ದಸರಾ’ವನ್ನ ರಾಷ್ಟ್ರಪತಿ ಉದ್ಘಾಟಿಸಲಿದ್ದಾರೆ

ಬೆಂಗಳೂರು: ಮೈಸೂರು ದಸರಾ ವನ್ನ ಈ ಬಾರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಲಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೆ ಮೊದಲ ಬಾರಿಗೆ ರಾಷ್ಟ್ರಪತಿಗಳಿಂದ ಉದ್ಘಾಟನೆ ಮಾಡಲು ನಿರ್ಧಾರ ಮಾಡಿದ್ದೇವೆ ಇದಕ್ಕೆ ದ್ರೌಪದಿ ಮುರ್ಮು ಅವರು ಒಪ್ಪಿಕೊಂಡಿದ್ದಾರೆ ಎಂದು ಸಿಎಂ ತಿಳಿಸಿದರು.

ಸೆಪ್ಟೆಂಬರ್ 26 ದಸರಾ ಆರಂಭ ಆಗಲಿದೆ. ಈ ಹಿನ್ನಲೆಯಲ್ಲಿ ‌ಯಾರು ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಸಭೆ ನಡೆದಿತ್ತು. ಈ ಸಭೆ ಬಳಿಕ ರಾಷ್ಟ್ರಪತಿ ಅವರಿಗೆ ದಸರಾ ಆಹ್ವಾನಕ್ಕೆ ಪತ್ರ ಬರೆಯಲಾಗಿತ್ತು. ನಮ್ಮ ಪತ್ರಕ್ಕೆ ಸಮ್ಮತಿಸಿ ಇಂದು ಪತ್ರ ಬಂದಿದೆ. ಹೀಗಾಗಿ ಈ ಬಾರಿ ರಾಷ್ಟ್ರದ ಪ್ರಥಮ ಪ್ರಜೆ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಬೆಂಗಳೂರಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.

 

RELATED ARTICLES

Related Articles

TRENDING ARTICLES