Wednesday, January 22, 2025

ನಿರುದ್ಯೋಗ, ಬೆಲೆ ಏರಿಕೆ, ರೈತರ ಸಮಸ್ಯೆ ವಿರುದ್ಧ ಜೋಡೋ ಯಾತ್ರೆ : ಸಿದ್ದರಾಮಯ್ಯ

ಬಾಗಲಕೋಟೆ: ಕೇಂದ್ರ ಸಚಿವ ಸ್ಮೃತಿ ಇರಾನಿ ಅವರು ಪಾಪ ಅವರಿಗೆ ಜವಾಬ್ದಾರಿ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ, ಭಾರತ್ ತೋಡೋ ಯಾತ್ರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿಕೆ ವಿಚಾರವಾಗಿ ಜಿಲ್ಲೆಯ ಚೊಳಚಗುಡ್ಡ ಗ್ರಾಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ದೇಶದಲ್ಲಿ ಇಂದು ಜನರನ್ನ ಒಗ್ಗೂಡಿಸುವುದು ಅಗತ್ಯವಿದೆ. ದೇಶದ ಐಕ್ಯತೆ ಬಹಳ ಮುಖ್ಯ. ಜನಗಳ ಮನಸ್ಸನ್ನು ಒಗ್ಗೂಡಿಸುವುದು ಬಹಳ ಮುಖ್ಯವಾಗಿದೆ. ಹೀಗಾಗಿ ಈ ಯಾತ್ರೆ ಹಮ್ಮಿಕೊಂಡಿದ್ದೇವೆ ಎಂದರು.

ಇನ್ನು ಜನಗಳು ಬಹಳ ಆತಂಕದಲ್ಲಿ, ಭಯದಿಂದ ಬದುಕುವ ವಾತವರಣವಿದೆ. ಅದಕ್ಕೆ ಜನರ ಮನಸ್ಸುಗಳನ್ನ ಒಗ್ಗೂಡಿಸುವುದಕ್ಕೆ ನಿಮ್ಮ ಜೊತೆ ನಾವಿದ್ದೇವೆ ಅನ್ನೋದಕ್ಕೆ ಈ ಯಾತ್ರೆಯಾಗಿದೆ. ದೇಶದಲ್ಲಿ ಬೆಲೆ ಏರಿಕೆ, ನಿರುದ್ಯೋಗ, ರೈತರ ಸಮಸ್ಯೆ, ಮಹಿಳೆಯರ ಸಮಸ್ಯೆ ಇದೆ. ಇದೆಲ್ಲ ಜನರಿಗೆ ಗೊತ್ತಾಗಬೇಕಲ್ಲ, ಜನರಿಗೆ ಜಾಗೃತಿ ಮೂಡಿಸುವುದಕ್ಕೆ ಭಾರತ ಜೋಡೋ ಯಾತ್ರೆ ನಡೆಯುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

RELATED ARTICLES

Related Articles

TRENDING ARTICLES