Thursday, January 23, 2025

ಭೀಮಾ ನದಿಗೆ ನೀರು ಬಿಡುಗಡೆ

ವಿಜಯಪುರ : ಮಹಾರಾಷ್ಟ್ರದಲ್ಲಿ ಮಳೆ ಅಧಿಕಗೊಂಡ ಹಿನ್ನೆಲೆಯಲ್ಲಿ ಭೀಮಾ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದೆ. ಇನ್ನೂ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ನದಿ ತೀರದ ಜನರು ಎಚ್ಚರಿಕೆಯಿಂದಿರುವಂತೆ ಕಟ್ಟೆಚ್ಚರವಹಿಸಲಾಗಿದೆ.

ಉಜನಿ ಜಲಾಶಯದಿಂದ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಸುಮಾರು ಭೀಮಾ ನದಿಗೆ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ವಿಜಯಪುರ ಜಿಲ್ಲೆ ದೇವಣಗಾಂವ, ಶಂಭೆವಾಡ, ಕಡ್ಲೆವಾಡ ಪಿಎ ಗ್ರಾಮದಲ್ಲಿ ಡಂಗೂರ ಸಾರಿ ಎಚ್ಚರಿಕೆ ನೀಡಲಾಗಿದೆ. ನದಿ ತೀರದ ಮಂದಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಜನ, ಜಾನುವಾರುಗಳು ನದಿ ತೀರಕ್ಕೆ ತೆರಳದಂತೆ ಸೂಚನೆಯಲ್ಲಿ ತಿಳಿಸಲಾಗಿದೆ. ನದಿ ದಡದಲ್ಲಿ ಅಳವಡಿಸಿದ್ದ ಪಂಪ್​ಸೆಟ್​​​, ವಿದ್ಯುತ್​​​ ಉಪಕರಣಗಳನ್ನು ಸ್ಥಳಾಂತರಿಸುವಂತೆ ಪಂಚಾಯಿತಿ ಅಧಿಕಾರಿಗಳು ರೈತರಿಗೆ ಸೂಚನೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES