Thursday, December 19, 2024

ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಭಾಜನರಾದ ನಟ ರಮೇಶ್ ಅರವಿಂದ್

ಬೆಳಗಾವಿ: ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ವತಿಯಿಂದ ಕೊಡಮಾಡುವ ಗೌರವ ಡಾಕ್ಟರೇಟ್​ ಪ್ರಶಸ್ತಿಗೆ ನಟ ರಮೇಶ್ ಅರವಿಂದ್ ಅವರು  ಆಯ್ಕೆಯಾಗಿದ್ದಾರೆ.

ಸಿನಿಮಾ ಕ್ಷೇತ್ರದಲ್ಲಿನ‌ ಸಾಧನೆ, ಸಾಮಾಜಿಕ ಸೇವೆ ಪರಿಗಣಿಸಿ ನೀಡುವ ಗೌರವ ಡಾಕ್ಟರೇಟ್​ ಪ್ರಶಸ್ತಿಗೆ ನಟ ರಮೇಶ್ ಅರವಿಂದ್ ಅವರ ಜತೆಗೆ ಮಾತಾ ಅನ್ನಪೂರ್ಣ ತಾಯಿ ಹಾಗೂ ಪಳನಿ ಅವರು ಭಾಜನರಾಗಿದ್ದಾರೆ.

ಬುಧವಾರ (ಸೆ.14) ಸುವರ್ಣಸೌಧದಲ್ಲಿ ನಡೆಯಲಿರುವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಈ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್, ಉನ್ನತ ಶಿಕ್ಷಣ ‌ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ ಭಾಗವಹಿಸಲಿದ್ದಾರೆ.

RELATED ARTICLES

Related Articles

TRENDING ARTICLES