ನವದೆಹಲಿ: ಅಕ್ಟೋಬರ್ 16 ರಿಂದ ನವೆಂಬರ್ 13 ರವರೆಗೂ ನಡೆಯುವ ಟಿ-20 ವಿಶ್ವಕಪ್ಗೆ ಭಾರತ ತಂಡವನ್ನ ಬಿಸಿಸಿಐ ಪ್ರಕಟ ಮಾಡಿದೆ.
ಆಸ್ಟ್ರೇಲಿಯಾದಲ್ಲಿ ಮುಂಬರುವ ಅಕ್ಟೋಬರ್ 16 ರಿಂದ ಟಿ-20 ವಿಶ್ವಕಪ್ ಆರಂಭವಾಗುತ್ತಿದ್ದು, ಬಿಸಿಸಿಐ 15 ಸದಸ್ಯರ ಟೀಂ ಇಂಡಿಯಾ ತಂಡವನ್ನು ಆಯ್ಕೆ ಮಾಡಲಾಗಿದೆ. ಒಟ್ಟು 12 ತಂಡಗಳು ಕಾದಾಟ ನಡೆಸಲಿದ್ದು, ಅಕ್ಟೋಬರ್ 23 ರಂದು ಭಾರತವು ಪಾಕಿಸ್ಥಾನವನ್ನ ಎದುರಿಸಲಿದೆ.
ಏಷ್ಯಾಕಪ್‌ನಲ್ಲಿ ಭಾರತ ಹೀನಾಯ ಪ್ರದರ್ಶನ ನೀಡಿದ ಹಿನ್ನಲೆಯಲ್ಲಿ ಭಾರತ ತಂಡದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಬೌಲರ್ ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ಅವರು ವಿಶ್ವಕಪ್ಗೆ ಆಯ್ಕೆಯಾಗಿದ್ದಾರೆ.
ಇನ್ನು ರವೀಂದ್ರ ಜಡೇಜಾ ಅವರಿಗೆ ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾದ ಹಿನ್ನಲೆಯಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಆದ್ದರಿಂದ ಅವರ ಬದಲಿಗೆ ಅಲ್ರೌಂಡರ್ ಅಕ್ಷರ್ ಪಟೇಲ್ ಅವರನ್ನ ವಿಶ್ವಕಪ್ಗೆ ಆಯ್ಕೆಯಾಗಿದ್ದಾರೆ.
ವಿಶ್ವಕಪ್ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಬ್ ಪಂತ್ (ಕೀಪರ್), ದಿನೇಶ್ ಕಾರ್ತಿಕ್ (ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯಜುವೇಂದ್ರ ಚಾಹಲ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್