Monday, December 23, 2024

BBMP ಜಂಟಿ ಆಯುಕ್ತ ಮೇಲೆ ಲೋಕಾಯುಕ್ತ ದಾಳಿ; 4 ಲಕ್ಷ ಸಮೇತ ಲಾಕ್

ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಿಭಾಗ ಕಚೇರಿ ಮೇಲೆ ಎಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ನೇತೃತ್ವದ ಒಟ್ಟು 8 ಜನ ಲೋಕಾಯುಕ್ತ ಅಧಿಕಾರಿಗಳಿಂದ ಇಂದು ದಾಳಿ ನಡೆಸಲಾಗಿದೆ.

ಬೆಂಗಳೂರಿನ ಮಂತ್ರಿ ಮಾಲ್ ಎದುರು ಇರುವ ಬಿಬಿಎಂಪಿ ಪಶ್ಚಿಮ ವಿಭಾಗ ಕಚೇರಿ ಮೇಲೆ ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್​ ಲಂಚ ಪಡೆಯುತ್ತಿದ್ದರು. ಹಣದ ಸಮೇತ ಶ್ರೀನಿವಾಸ್​ ನಿಂತಿದ್ದರು ಈ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

4 ಲಕ್ಷ ಲಂಚದ ಹಣ ಪಡೆಯುವಾಗ ಶ್ರೀನಿವಾಸ್ ಹಾಗೂ ಅವರ ಪಿಎ ಉಮೇಶ್ ಸಿಕ್ಕಿಬಿದ್ದಿದ್ದಾರೆ. ಸದ್ಯ ಬಿಬಿಎಂಪಿ ಕಚೇರಿಯಲ್ಲಿ ಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್ ಅವರನ್ನ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES