Wednesday, January 22, 2025

ಹಾಲಿನ ದರದಲ್ಲಿ 3.ರೂ ಹೆಚ್ಚಳ

ಬೆಂಗಳೂರು : ಬೆಲೆ ಏರಿಕೆಯಿಂದ ಈಗಾಗಲೇ ಜನ ರೋಸಿ ಹೋಗಿದ್ದಾರೆ. ಈ ನಡುವೆ ನಂದಿನ ಹಾಲಿನ ದರವನ್ನು 3 ರೂ.ಗೆ ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ.

ಹಾಲಿನ ದರ ಹೆಚ್ಚಳ ಮಾಡುವಂತೆ ಕಳೆದ 8 ತಿಂಗಳಿಂದ KMF ವತಿಯಿಂದ ಸರ್ಕಾರಕ್ಕೆ ಮನವಿ ಮಾಡಿಲಾಗಿದೆ ಹೀಗಿದ್ದರೂ ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ರೈತರು ಹಾಗೂ KMFನ ಜಿಲ್ಲಾ ಹಾಲು ಒಕ್ಕೂಟಗಳಿಂದ ಹಾಲಿನ ದರ ಹೆಚ್ಚಳಕ್ಕೆ ಒತ್ತಡ ಹೆಚ್ಚಾಗಿದೆ.

ಇನ್ನು, KMF ತನಗೆ ಇರುವ ಅಧಿಕಾರವನ್ನು ಬಳಸಿಕೊಂಡು ತಾನೇ ಹಾಲಿನ ದರವನ್ನು ಏರಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ನಗರದ ಖಾಸಗಿ ಹೋಟೆಲ್‍ನಲ್ಲಿ KMF ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ನಡೆದ KMF ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, KMFನ ಎಲ್ಲಾ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದಕ್ಕೆ ಬೆಂಬಲ ನೀಡಿದೆ. ನಂದಿನಿ ಹಾಲಿನ ದರವನ್ನು ಮೂರು ರೂಪಾಯಿ ಹೆಚ್ಚಳ ಮಾಡಲಿದ್ದು, ಇದನ್ನು ಹಾಲು ಉತ್ಪಾದಕ ರೈತರಿಗೆ ವರ್ಗಾಯಿಸಲಾಗುವುದು ಎಂದು ಹೇಳಲಾಗಿದೆ.

RELATED ARTICLES

Related Articles

TRENDING ARTICLES