ಬೆಂಗಳೂರು: ಮಳೆಗಾಲದ ವಿಧಾನ ಮಂಡಲ ಅಧಿವೇಶನ ಆರಂಭವಾದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರು ಖಾಸಗಿ ಹೊಟೇಲ್ ನಲ್ಲಿ ಶಾಸಕಾಂಗ ಸಭೆ ಕರೆದಿದ್ದಾರೆ.
ಬಿಜೆಪಿಯ ಭ್ರಷ್ಟಾಚಾರ ವಿಚಾರ, ಕಮಿಷನ್ ಆರೋಪ, ನೇಮಕಾತಿ ಅಕ್ರಮ, ಪ್ರವಾಹ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರದ ವಿಫಲ ಸೇರಿದಂತೆ ಹಲವು ವಿಚಾರಗಳನ್ನ ಈ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಸಲಿದೆ.
ರಾಜ್ಯ ಸರ್ಕಾರ ವೈಫ್ಯಲಗಳನ್ನ ವಿಧಾನಸಭೆ ಅಧಿವೇಶನದಲ್ಲಿ ಹೋರಾಟ ನಡೆಸಬೇಕಾದ ವಿಷಯಗಳ ಕುರಿತು ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರೊಂದಿಗೆ ಸಮಾಲೋಚನೆ ನಡೆಸಲಿದ್ದು, ಈಗಾಗಲೇ ಶಾಸಕಾಂಗ ಸಭೆಗೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಆರ್.ವಿ ದೇಶಪಾಂಡೆ, ಯು.ಟಿ ಖಾದರ್, ಎಸ್.ಎಸ್ ಮಲ್ಲಿಕಾರ್ಜುನ್, ಶಾಸಕ ಶಿವಾನಂದ್ ಪಾಟೀಲ್, ಪ್ರಿಯಾಂಕ್ ಖರ್ಗೆ ಆಗಮಿಸಿದ್ದು, ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.